ಶಿಡ್ಲಘಟ್ಟ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟ: ರಾಜೀವ್ ಗೌಡರಿಂದ ಸ್ವಪಕ್ಷೀಯರ ವಿರುದ್ಧವೇ ಆರೋಪ
ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಳೆದ ವಿಧಾನಸಭೆ ಸೋಲಿಗೆ ಸ್ವಪಕ್ಷೀಯರ ಷಡ್ಯಂತ್ರವೇ ಕಾರಣ ಎಂದು ಆರೋಪಿಸಿ, ಪಕ್ಷದಲ್ಲಿರುವ ಹಲವು ಬಣಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಶಿಡ್ಲಘಟ್ಟ ಕಾಂಗ್ರೆಸ್‌ನಲ್ಲಿ ಆಂತರಿಕ ಬಿಕ್ಕಟ್ಟನ್ನು ಬಹಿರಂಗಪಡಿಸಿದೆ.
ಚಿಕ್ಕಬಳ್ಳಾಪುರ, ಅಕ್ಟೋಬರ್ 19: ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ಧ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈ ಹಿಂದೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿದ ಪ್ರಕರಣದಿಂದ ಸುದ್ದಿಯಾಗಿದ್ದ ರಾಜೀವ್ ಗೌಡ, ಈಗ ಮತ್ತೊಮ್ಮೆ ಸುದ್ದಿಯ ಕೇಂದ್ರ ಬಿಂದುವಾಗಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದ ಎಂಎಲ್‌ಸಿ ಚುನಾವಣಾ ಸಂಬಂಧ ಡಾ.ಎಂ.ಸಿ.ಸುಧಾಕರ್ ಮತ್ತು ಶಶಿಧರ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಸಭೆಗೆ ರಾಜೀವ್ ಗೌಡ ಗೈರಾಗಿದ್ದರು. ಆದರೆ ಬಳಿಕ ಸ್ವತಃ ರಾಜೀವ್ ಗೌಡ ಅವರೇ ಕಾಂಗ್ರೆಸ್ ಭವನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಕಾರ್ಯಕರ್ತರನ್ನು ಒಟ್ಟುಗೂಡಿಸಿ, ಎಂಎಲ್‌ಸಿ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರ ಪರವಾಗಿ ಸಭೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದೊಳಗಿನ ಕೆಲವು ನಾಯಕರು ತಮ್ಮ ವಿರುದ್ಧ ಕೆಲಸ ಮಾಡಿ ಸೋಲಿಗೆ ಕಾರಣರಾಗಿದ್ದಾರೆ ಎಂದು ರಾಜೀವ್ ಗೌಡ ಆರೋಪಿಸಿದ್ದು, ನನ್ನನ್ನು ಸೋಲಿಸಲು ಕೆಲವರು ಕುತಂತ್ರ ಮಾಡಿದ್ದರು ಎಂದು ನೇರವಾಗಿ ತಮ್ಮ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಬಿ.ಕೆ.ಹರಿಪ್ರಸಾದ್ ಅವರ ಬೆಂಬಲ ತಮಗಿದೆ ಎಂದು ಹೇಳಿಕೊಳ್ಳುವ ಮೂಲಕ ಪಕ್ಷದಲ್ಲಿ ತಾವೇ ನಾಯಕ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಈ ಆಂತರಿಕ ಬಿಕ್ಕಟ್ಟು ಪಕ್ಷಕ್ಕೆ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಸಂಕಷ್ಟ ತರಬಹುದು ಎಂಬ ಆತಂಕ ಕಾರ್ಯಕರ್ತರಿಂದ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 19, 2026 12:41 PM
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್ಗೆ ಡಿಕೆಶಿ ಕೌಂಟರ್
ಹೆಚ್ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

