ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಮಾನವ ಸರಪಳಿಯಲ್ಲಿ ನವ ಜೋಡಿ ಭಾಗಿ
ರಾಜ್ಯದಾದ್ಯಂತ ಸುಮಾರು 2.500 ಕಿ.ಮೀ ಉದ್ಧದ ಮಾನವ ಸರಪಳಿ ರಚಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ ಸುಮಾರು 60 ಕಿ.ಮೀ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತಿದೆ. ಮಾನವ ಸರಪಳಿಯಲ್ಲಿ ನವ ವಿವಾಹಿತರು ಕೂಡ ಭಾಗಿಯಾಗಿದ್ದಾರೆ. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ಭಾಗಿಯಾಗಿದ್ದಾರೆ.
ಶಿವಮೊಗ್ಗ, ಸೆ.15: ಇಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಜಿಲ್ಲಾಡಳಿತ ವತಿಯಿಂದ ಮಾನವ ಸರಪಳಿ ಆಯೋಜಿಸಲಾಗಿದೆ. ಮಾನವ ಸರಪಳಿಯಲ್ಲಿ ನವ ವಿವಾಹಿತರು ಕೂಡ ಭಾಗಿಯಾಗಿದ್ದಾರೆ. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ಭಾಗಿಯಾಗಿದ್ದಾರೆ.
ಇಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ವಿಶ್ವದ ಅತಿದೊಡ್ಡ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಾದ್ಯಂತ ಸುಮಾರು 2.500 ಕಿ.ಮೀ ಉದ್ಧದ ಮಾನವ ಸರಪಳಿ ರಚಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ ಸುಮಾರು 60 ಕಿ.ಮೀ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತಿದೆ. ಮಾನವ ಸರಪಳಿಯಲ್ಲಿ ಸರಕಾರಿ ಶಾಲೆ, ಖಾಸಗಿ ಶಾಲೆ ಮಕ್ಕಳು ಸರಕಾರಿ ನೌಕರರು ಭಾಗಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ