AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿವಾರ್ಯ ಕಾರಣಗಳಿಂದಾಗಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಿಳಾ ದಿನಾಚರಣೆ ಆಚರಿಸಲಾಗಿದೆ: ಶಿವಕುಮಾರ್

ಅನಿವಾರ್ಯ ಕಾರಣಗಳಿಂದಾಗಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಿಳಾ ದಿನಾಚರಣೆ ಆಚರಿಸಲಾಗಿದೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 15, 2025 | 6:11 PM

ಮಾರ್ಚ್ 8ರಂದೇ ಕಚೇರಿಯಲ್ಲಿ ಮಹಿಳಾ ದಿನಾಚಾರಣೆ ಅಚರಿಸಲು ಮಹಿಳಾ ಕೆಪಿಸಿಸಿ ಅಧ್ಯಕ್ಷೆ ಸೌಮ್ಯರೆಡ್ಡಿ ಸಕಲ ತಯಾರಿ ಮಾಡಿಕೊಂಡಿದ್ದರು, ಅದರೆ ಬೇರೆ ಬೇರೆ ಕಾರಣಗಳಿಂದಾಗಿ ತಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲಭ್ಯರಿಲ್ಲದ ಕಾರಣ ಇವತ್ತು ಇಲ್ಲಿ ಕಾರ್ಯಕ್ರಮ ನಡೆಸುತ್ತಿದ್ದಾರೆ, ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಷಯಗಳು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, 15 ಮಾರ್ಚ್: ನಗರದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು (International Women’s Day ) ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದಿನ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಪುಸ್ತಕವೊಂದರಲ್ಲಿ ಬರೆದಿರುವ ಮಾತನ್ನು ಉಲ್ಲೇಖಸಿದರು. ಜನರನ್ನು ಎಬ್ಬಿಸುವ ಮೊದಲು ಮಹಿಳೆಯರನ್ನು ಎಬ್ಬಿಸಬೇಕು, ಮಹಿಳೆ ಮುಂದೆ ಸಾಗಿದರೆ ಆಕೆಯೊಂದಿಗೆ ಕುಟುಂಬ ಸಾಗುತ್ತದೆ, ಗ್ರಾಮ ಸಾಗುತ್ತದೆ ಮತ್ತು ದೇಶವೂ ಸಾಗುತ್ತದೆ ಎಂದು ಅವರು ಬರೆದಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ: ಡಿಕೆ ಶಿವಕುಮಾರ್ ಆಯೋಜಿಸಿದ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು