International Yoga Day 2026 : ಕೋಲ್ಕತ್ತಾದಲ್ಲಿ ನಮೋ ಯೋಗ!
ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ ಪ್ರಚಾರಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಬಾರಿ ಕೊಲ್ಕತ್ತಾವನ್ನು ಪ್ರಮುಖ ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ನೇರಪ್ರಸಾರ ಇಲ್ಲಿದೆ.
ಕೋಲ್ಕತ್ತಾ, ಜೂನ್ 21: ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ ಪ್ರಚಾರಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಬಾರಿ ಕೊಲ್ಕತ್ತಾವನ್ನು ಪ್ರಮುಖ ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 21, 2026 06:41 AM
Follow Us
