AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day: ಅಂತಾರಾಷ್ಟ್ರೀಯ ಯೋಗ ದಿನ; ಭಾರತದ ಗಡಿಯಲ್ಲಿ ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು

International Yoga Day: ಅಂತಾರಾಷ್ಟ್ರೀಯ ಯೋಗ ದಿನ; ಭಾರತದ ಗಡಿಯಲ್ಲಿ ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು

ಸುಷ್ಮಾ ಚಕ್ರೆ
|

Updated on: Jun 21, 2024 | 7:34 PM

Viral Video: ಇಂದು ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಭಾರತೀಯ ಸೇನೆಯ ಸಿಬ್ಬಂದಿ ಭಾರತದ ಉತ್ತರ ಗಡಿಯಲ್ಲಿ ಮಂಜುಗಡ್ಡೆಯ ಎತ್ತರದ ಪ್ರದೇಶದಲ್ಲಿ ಯೋಗ ಪ್ರದರ್ಶನ ಮಾಡಿದ್ದಾರೆ.

ನವದೆಹಲಿ: ಪ್ರತಿ ವರ್ಷ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day 2024) ಆಚರಿಸಲಾಗುತ್ತದೆ. ಇದು ಯೋಗದ ಪ್ರಾಚೀನ ಅಭ್ಯಾಸವನ್ನು ಗೌರವಿಸಲು ವಿಶ್ವಾದ್ಯಂತ ಗುರುತಿಸಲ್ಪಟ್ಟ ವಾರ್ಷಿಕ ಕಾರ್ಯಕ್ರಮವಾಗಿದೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಶಿಫಾರಸಿನ ಮೇಲೆ ವಿಶ್ವಸಂಸ್ಥೆ ಈ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತ್ತು. ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವಾದ ಇಂದು ಭಾರತೀಯ ಸೇನೆಯ ಅಧಿಕಾರಿಗಳು ಉತ್ತರ ಗಡಿಯಲ್ಲಿ ಹಿಮದಿಂದ ಆವೃತವಾದ ಎತ್ತರದ ಜಾಗದಲ್ಲಿ ಯೋಗವನ್ನು ಪ್ರದರ್ಶಿಸಿದ್ದಾರೆ. ಭಾರತದ ತ್ರಿವರ್ಣ ಧ್ವಜದೊಂದಿಗೆ ಸೈನಿಕರು ಮೈ ಕೊರೆಯುವ ಚಳಿಯಲ್ಲಿ ಹಿಮದ ನಡುವೆ ಯೋಗಾಸನ ಮಾಡುವುದನ್ನು ನೋಡಬಹುದು.

ಇಂದು ವಿಶ್ವದಾದ್ಯಂತ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದೇ ವೇಳೆ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ