Ballari: ಹಳೇ ದೋಸ್ತಿಗಳು ಬಿ ಶ್ರೀರಾಮುಲು ಮತ್ತು ಸಂತೋಷ್ ಲಾಡ್ ಸಂಡೂರು ಜಾತ್ರೆಯಲ್ಲಿ ಭೇಟಿಯಾದಾಗ ಹೇಗೆ ವರ್ತಿಸಿದರು ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Feb 02, 2023 | 11:23 AM

ಶ್ರೀರಾಮುಲು ಮತ್ತು ಸಂತೋಷ್ ಬಹಳ ದಿನಗಳ ನಂತರ ಭೇಟಿಯಾಗಿದ್ದಾರೆ. ಪರಸ್ಪರ ಎದುರಾದಾಗ ಆತ್ಮೀಯತೆಯಿಂದ ಆಲಂಗಿಸಿಕೊಂಡು ಹರ್ಷ ವ್ಯಕ್ತಪಡಿಸುತ್ತಾ ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ.

ಬಳ್ಳಾರಿ: ನಾವು ಆಗಾಗ ಇದನ್ನು ಹೇಳುತ್ತಿರುತ್ತೇವೆ. ರಾಜಕಾರಣಿಗಳು ಬೇರೆ ಬೇರೆ ಪಕ್ಷಗಳನ್ನು ಪ್ರತಿನಿಧಿಸಿದರೂ ಅವರ ನಡುವೆ ಸ್ನೇಹವಿರುತ್ತದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿಎಸ್ ಯಡಿಯೂರಪ್ಪ ರಾಜಕೀಯವಾಗಿ ಬದ್ಧ ವೈರಿಗಳಾದರೂ ಅವರ ನಡುವೆ ನಮ್ಮಲ್ಲಿ ಸೋಜಿಗ ಹುಟ್ಟುವಷ್ಟು ಆತ್ಮೀಯತೆ ಇದೆ. ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಸಂತೋಷ್ ಲಾಡ್ (Santosh S Lad ) ಮತ್ತು ಬಸವರಾಜ ಬೊಮ್ಮಾಯಿ ಸಂಪುಟಟದಲ್ಲಿ ಸಾರಿಗೆ ಸಚಿವರಾಗಿರುವ ಬಿ ಶ್ರೀರಾಮುಲು (B Sriramulu) ನಡುವೆಯೂ ಗಾಢವಾದ ಸ್ನೇಹವಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿರುವ ಬನ್ನಿಹಟ್ಟಿ ಜಾತ್ರೆಯಲ್ಲಿ ಇವರಿಬ್ಬರು ಬಹಳ ದಿನಗಳ ನಂತರ ಭೇಟಿಯಾಗಿದ್ದಾರೆ. ಪರಸ್ಪರ ಎದುರಾದಾಗ ಆತ್ಮೀಯತೆಯಿಂದ ಆಲಂಗಿಸಿಕೊಂಡು ಹರ್ಷ ವ್ಯಕ್ತಪಡಿಸುತ್ತಾ ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.