ಟೀಸರ್‌ನಲ್ಲಿ ಅಸಹ್ಯ ದೃಶ್ಯ! ಯಶ್ ಸಿನಿಮಾ ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು ನೋಡಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್‌ನಲ್ಲಿ ಅಸಭ್ಯ ದೃಶ್ಯಗಳ ಕುರಿತು ವಕೀಲ ಲೋಹಿತ್ ಕುಮಾರ್ ಸೆನ್ಸಾರ್ ಮಂಡಳಿಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಗೆ ಎಚ್ಚರಿಕೆ ಇಲ್ಲದೆ ಪ್ರಸಾರವಾಗುತ್ತಿರುವ ಈ ಟೀಸರ್ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದೆಂಬ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸೆನ್ಸಾರ್ ಮಂಡಳಿಯ ನಿಯಮಗಳ ಪಾಲನೆಯನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು, ಜನವರಿ 10: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಟೀಸರ್ ಬಿಡುಗಡೆಯಾದ ನಂತರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿನ ಅಸಭ್ಯ ದೃಶ್ಯಗಳು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ‘ಟಿವಿ9’ ಜೊತೆ ಮಾತನಾಡಿದ ಲೋಹಿತ್ ಕುಮಾರ್, ಟೀಸರ್‌ನಲ್ಲಿ ಕಂಡುಬಂದ ದೃಶ್ಯಗಳನ್ನು ಗಮನಿಸಿದರೆ ಈ ಚಿತ್ರವು ಕುಟುಂಬ ಸದಸ್ಯರೊಂದಿಗೆ ನೋಡಲು ಸೂಕ್ತವಲ್ಲ. ಚಿತ್ರಮಂದಿರಗಳಲ್ಲಿ ಎ ಸರ್ಟಿಫಿಕೇಟ್ ಇದ್ದರೆ ಮಕ್ಕಳನ್ನು ಪ್ರವೇಶಿಸದಂತೆ ತಡೆಯಲಾಗುತ್ತದೆ. ಆದರೆ ಯೂಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಟೀಸರ್‌ಗಳಿಗೆ ಯಾವುದೇ ಮಾರ್ಗಸೂಚಿಗಳಿಲ್ಲದಿರುವುದು ಸಮಸ್ಯೆಯಾಗಿದೆ ಎಂದು ತಿಳಿಸಿದರು. ಸೆನ್ಸಾರ್ ಮಂಡಳಿ ಟೀಸರ್‌ಗಳಿಗೂ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

