Invest Karnataka 2025 Live: ಬೆಂಗಳೂರಿನಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025ರ ನೇರಪ್ರಸಾರ
ಬೆಂಗಳೂರು ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಚಾಲನೆ ಸಿಕ್ಕಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಸಮಾವೇಶವನ್ನು ಉದ್ಘಾಟಿಸಿದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ಉದ್ಯಮಿಗಳು ಭಾಗಿಯಾಗಿದ್ದಾರೆ. ಇನ್ನು ಮಂಡಿ ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರು ವ್ಹೀಲ್ ಚೇರ್ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.
ಬೆಂಗಳೂರು, (ಫೆಬ್ರವರಿ 11): ಬೆಂಗಳೂರಿನ ಅರಮನೆ ಮೈದಾನದಲ್ಲಿಂದು (ಫೆಬ್ರವರಿ 11) ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಚಾಲನೆ ಸಿಕ್ಕಿದೆ. ಬೃಹತ್ ಕೈಗಾರಿಕಾ ಇಲಾಖೆ ಅಡಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್. ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಎಂ.ಬಿ.ಪಾಟೀಲ್ ಡಾ.ಜಿ.ಪರಮೇಶ್ವರ್, ಎಂ.ಸಿ.ಸುಧಾಕರ್, ಕೆ.ಹೆಚ್.ಮುನಿಯಪ್ಪ, ಶಿವಾನಂದ ಪಾಟೀಲ್, ಕೃಷ್ಣ ಭೈರೇಗೌಡ ಭಾಗಿಯಾಗಿದ್ದರು. ಇನ್ನು ಉದ್ಯಮಿಗಳಾದ ಆನಂದ್ ಮಹೀಂದ್ರಾ, ಕಿರಣ್ ಮಜುಂದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಹಾಗಾದ್ರೆ ಈ ಬಾರಿಯ ಇನ್ವೆಸ್ಟ್ ಕರ್ನಾಟಕದಲ್ಲಿ ಏನೆಲ್ಲ ಸ್ಪೆಷಾಲಿಟಿ ಇರಲಿದೆ ಎನ್ನುವುದನ್ನು ನೇರಪ್ರಸಾರದಲ್ಲಿ ನೋಡಿ.
Published on: Feb 11, 2025 05:08 PM