ತನಿಖಾಧಿಕಾರಿಗಳು ಸಿದ್ದರಾಮಯ್ಯರನ್ನು ವಶಕ್ಕೆ ಪಡೆಯುವುದು ಅತ್ಯವಶ್ಯಕವಾಗಿದೆ: ಸ್ನೇಹಮಯಿ ಕೃಷ್ಣ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ವೆ ನಂಬರ್ 464 ರಲ್ಲಿರುವ ನಿವೇಶನಗಳನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಅದಾಗಲೇ ಮಾರಾಟ ಕೂಡ ಮಾಡಿರುವುದರಿಂದ ಅವು ಪ್ರಾಧಿಕಾರದ ಸೊತ್ತಲ್ಲ ಖಾಸಗಿ ಅಂದರೆ ದುಡ್ಡು ಕೊಟ್ಟು ಖರೀದಿಸಿರುವ ಜನರ ಸೊತ್ತು ಎಂದು ಸ್ನೇಹಮಯಿ ಕೃಷ್ಣ ಹೇಳಿದರು.
ಮೈಸೂರು: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಎದುರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಡಾ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ, ಗಂಭೀರವಾದ ಆರೋಪಗಳಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸದಿರುವ ಬಗ್ಗೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯವರು ಮುಡಾ ಪ್ರಕರಣದ ಬಗ್ಗೆ ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತಿರುವುದರಿಂದ ಅವರನ್ನು ನ್ಯಾಯಾಂಗ ವಶಕ್ಕೆ ಪಡೆಯುವುದು ಅತ್ಯವಶ್ಯಕವಾಗಿದೆ ಎಂದು ಕೃಷ್ಣ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣ ಕೇಸ್: ಸಿಎಂ ಪತ್ನಿ ವಾಪಸ್ ನೀಡಿದ್ದ 14 ನಿವೇಶನಗಳ ಖಾತೆ ರದ್ದು!
Latest Videos