ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದೆ: ಬಿ ದಯಾನಂದ, ಪೊಲೀಸ್ ಆಯುಕ್ತ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದೆ: ಬಿ ದಯಾನಂದ, ಪೊಲೀಸ್ ಆಯುಕ್ತ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 16, 2024 | 1:39 PM

ಎಲ್ಲರಿಗೂ ಗೊತ್ತಿರುವ ಹಾಗೆ ಜೂನ್ 9 ರಂದು ರೇಣುಕಾಸ್ವಾಮಿ ರಕ್ತಸಿಕ್ತ ಮೃತದೇಹ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಸಿಕ್ಕಿತ್ತು. ಚಿತ್ರದುರ್ಗ ಮೂಲದವರಾಗಿದ್ದ ರೇಣುಕಾಸ್ವಾಮಿ ಫಾರ್ಮಾಸಿಯೊಂದರಲ್ಲಿ ಸ್ಟೋರ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದರು. ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ 15 ಆರೋಪಿಗಳನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಅಂತಿಮ ಘಟ್ಟ ತಲುಪಿದೆಯೆಂದು ಬೆಂಗಳೂರು ಪೊಲೀಸ್ ಕಮೀಶನರ್ ಬಿ ದಯಾನಂದ ಹೇಳಿದರು. ತಮ್ಮ ಕಚೇರಿಯಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಆಯುಕ್ತ, ಪ್ರಕರಣಕ್ಕೆ ಸಂಬಂಧಿಸಿದ ಮೌಖಿಕ, ಸಾಂಧರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಮತ್ತು ಅಲ್ಲಿಂದ ಸುಮಾರು ಶೇಕಡ 70 ರಷ್ಟು ವರದಿಗಳು ತಮ್ಮ ಕೈ ಸೇರಿವೆ ಎಂದು ಹೇಳಿದರು. ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್​ಎಸ್​ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು ಕೆಲ ದಿನಗಳಲ್ಲಿ ತಮ್ಮನ್ನು ತಲುಪಲಿವೆ. ಎಲ್ಲ ವರದಿಗಳು ಪ್ರಾಪ್ತವಾದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆಯಲಾಗುವುದು, ಅದಾದ ನಂತರ ಪ್ರಕರಣದ ಅಂತಿಮ ವರದಿ ಅಥವಾ ಚಾರ್ಜ್​ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಆಯುಕ್ತ ದಯಾನಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆಯನ್ನು ಮಾಧ್ಯಮಗಳಿಗಾಗಿ ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಜಿ ಪರಮೇಶ್ವರ್