IPL 2024: ಅಭ್ಯಾಸದ ವೇಳೆ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಕಂಡು ಎಲ್ಲರೂ ಶಾಕ್: ವಿಡಿಯೋ ನೋಡಿ

|

Updated on: Mar 15, 2024 | 8:20 AM

Rishabh Pant Practice Video: ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಸೇರಿ ಅಭ್ಯಾಸ ಆರಂಭಿಸಿದ್ದಾರೆ. ಅಲ್ಲದೆ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

14 ತಿಂಗಳ ವನವಾಸದ ನಂತರ, ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಷಭ್ ಪಂತ್ (Rishabh Pant) ಅಂತಿಮವಾಗಿ ಕ್ರಿಕೆಟ್ ಕ್ಷೇತ್ರಕ್ಕೆ ಮರಳಲು ಸಜ್ಜಾಗಿದ್ದಾರೆ. ಡಿಸೆಂಬರ್ 30, 2022 ರಂದು ನಡೆದ ಕಾರು ಅಪಘಾತದಿಂದ ಪಂತ್ 14 ತಿಂಗಳ ಕಾಲ ಆಟದಿಂದ ದೂರವುಳಿಯಬೇಕಾಯಿತು. ರಸ್ತೆ ಅಪಘಾತದಲ್ಲಿ ಪಂತ್ ತೀವ್ರವಾಗಿ ಗಾಯಗೊಂಡಿದ್ದರು. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರೂ ಪಂತ್ ಹೇಗೋ ಪ್ರಾಣಾಪಾಯದಿಂದ ಪಾರಾದರು. ಬಲಗಾಲಿಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಶಸ್ತ್ರಚಿಕಿತ್ಸೆಗೆ ಒಳಗಾಗಿ, ನಂತರ ಕಠಿಣ ಪರಿಶ್ರಮದ ಬಳಿಕ ಈಗ ಐಪಿಎಲ್ 2024 ಮೂಲಕ ವೃತ್ತಿಪರ ಕ್ರಿಕೆಟ್‌ಗೆ ಪುನರಾಗಮನ ಮಾಡಲಿದ್ದಾರೆ. ಪಂತ್ ಅವರ ಪುನರಾಗಮನವನ್ನು ಅದ್ಭುತವೆಂದು ಪರಿಗಣಿಸಲಾಗಿದೆ. ಏಕೆಂದರೆ ವೈದ್ಯರ ಪ್ರಕಾರ, ಪಂತ್ ಅನುಭವಿಸಿದ ಗಾಯದ ನಂತರ ಯಾವುದೇ ಆಟಗಾರನು ಮೈದಾನಕ್ಕೆ ಮರಳುವುದು ಸುಲಭಲ್ಲವಂತೆ. ಇದೀಗ ರಿಷಭ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಸೇರಿ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಅಲ್ಲದೆ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on