14 ವರ್ಷದ ವೈಭವ್ನ 11 ರಾಕೆಟ್ ಸಿಕ್ಸ್ಗಳು: ವಿಡಿಯೋ ವೀಕ್ಷಿಸಿ
IPL 2025 RR vs GT: ಇಂಡಿಯನ್ ಪ್ರೀಮಿಯರ್ ಲೀಗ್ನ 47ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 209 ರನ್ ಕಲೆಹಾಕಿದರೆ, ಈ ಗುರಿಯನ್ನು ರಾಜಸ್ಥಾನ್ ರಾಯಲ್ಸ್ ತಂಡವು 15.5 ಓವರ್ಗಳಲ್ಲಿ ಚೇಸ್ ಮಾಡಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 47ನೇ ಪಂದ್ಯದಲ್ಲಿ ಸಿಕ್ಸರ್ಗಳ ಸುರಿಮಳೆಯಾಗಿದೆ. ಹೀಗೆ ಸಿಕ್ಸರ್ಗಳ ಸುರಿಮಳೆ ಸುರಿಸಿದ್ದು 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi). ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 209 ರನ್ ಕಲೆಹಾಕಿದೆ. ಈ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಆರ್ಭಟ ಶುರು ಮಾಡಿದ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದರು. ಈ 35 ಎಸೆತಗಳಲ್ಲಿ 11 ಸಿಕ್ಸ್ಗಳು ಮೂಡಿಬಂದಿದ್ದವು ಎಂಬುದು ವಿಶೇಷ.
ಇನ್ನು ವೈಭವ್ ಸೂರ್ಯವಂಶಿ (101) ಅವರ ಈ ಸ್ಪೋಟಕ ಸೆಂಚುರಿ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು 15.5 ಓವರ್ಗಳಲ್ಲಿ 212 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.