Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ

IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ

ಝಾಹಿರ್ ಯೂಸುಫ್
|

Updated on: Mar 30, 2025 | 1:55 PM

Gujarat Titans vs Mumbai Indians: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡ 36 ರನ್​ಗಳ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ಗೆಲುವಿನ ಖಾತೆ ತೆರೆದಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ನಡುವೆ ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಕ್ರೋಶಭರಿತರಾಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದೆವು.

ಇದಕ್ಕೆ ಮುಖ್ಯ ಕಾರಣ ಗುಜರಾತ್ ಟೈಟಾನ್ಸ್ ಬ್ಯಾಟರ್​ಗಳ ಬೇಜವಾಬ್ದಾರಿಯುತ ಬ್ಯಾಟಿಂಗ್. ಉತ್ತಮ ಆರಂಭ ಪಡೆದಿದ್ದ ಜಿಟಿ ತಂಡವು 3 ವಿಕೆಟ್ ಕಳೆದುಕೊಂಡು 179 ರನ್ ಕಲೆಹಾಕಿತ್ತು. ಅಲ್ಲದೆ ಕೊನೆಯ ಎರಡು ಓವರ್​ಗಳಲ್ಲಿ ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದ್ದರು.

ಆದರೆ ಮುಂದಿನ ಎಸೆತಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು ಬ್ಯಾಕ್ ಟು ಬ್ಯಾಕ್ 3 ವಿಕೆಟ್ ಕಳೆದುಕೊಂಡಿದೆ. ಅದರಲ್ಲೂ ಶೆರ್ಫೇನ್ ರುದರ್​ಫೋರ್ಡ್ ಔಟಾಗುತ್ತಿದ್ದಂತೆ ಡಗೌಟ್​ನಲ್ಲಿದ್ದ ಆಶಿಶ್ ನೆಹ್ರಾ ಅವರ ಸಹನೆ ಕಟ್ಟೆಯೊಡೆದಿದೆ.

ಗುಜರಾತ್ ಟೈಟಾನ್ಸ್ ತಂಡದ ಬೇಜವಾಬ್ದಾರಿಯುತ ಬ್ಯಾಟಿಂಗ್ ನೋಡಿ ತಾಳ್ಮೆ ಕಳೆದುಕೊಂಡ ನೆಹ್ರಾ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಸನ್ನಿವೇಶವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡ 36 ರನ್​ಗಳ ಗೆಲುವು ದಾಖಲಿಸಿದೆ.