VIDEO: LSG ಫೀಲ್ಡರ್ಗಳ ಕಮಾಲ್: ವಾಟ್ ಎ ಕ್ಯಾಚ್..!
LSG vs PBKS: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕ ದಾಂಡಿಗ ಪ್ರಭ್ಸಿಮ್ರಾನ್ ಸಿಂಗ್ ಕೇವಲ 34 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 69 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಶ್ರೇಯಸ್ ಅಯ್ಯರ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 52 ರನ್ ಚಚ್ಚಿದರು. ಈ ಮೂಲಕ 16.2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿತು.
ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಇಬ್ಬರು ಫೀಲ್ಡರ್ಗಳು ತೋರಿದ ಪರಾಕ್ರಮ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಪಂದ್ಯದ 11ನೇ ಓವರ್ನ ಮೊದಲ ಎಸೆತದಲ್ಲಿ ಪ್ರಭ್ಸಿಮ್ರಾನ್ ಸಿಂಗ್ ಡೀಪ್ ಮಿಡ್ ವಿಕೆಟ್ನತ್ತ ಬಾರಿಸಿದ್ದರು. ಅಲ್ಲೇ ಫೀಲ್ಡಿಂಗ್ನಲ್ಲಿದ್ದ ಆಯುಷ್ ಬದೋನಿ ಗಾಳಿಯಲ್ಲಿ ಜಿಗಿಯುವ ಮೂಲಕ ಚೆಂಡನ್ನು ಬೌಂಡರಿ ಲೈನ್ನಿಂದ ಹೊರಕ್ಕೆ ಹಾಕಿದ್ದಾರೆ.
ಅಷ್ಟರಲ್ಲಾಗಲೇ ಓಡಿ ಬಂದಿದ್ದ ರವಿ ಬಿಷ್ಣೋಯ್ ತಕ್ಷಣವೇ ಜಿಗಿಯುವ ಮೂಲಕ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದರು. ಇದೀಗ ಈ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಲಕ್ನೋ ಸೂಪರ್ ಜೈಂಟ್ಸ್ ಫೀಲ್ಡರ್ಗಳ ಪರಾಕ್ರಮಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕ ದಾಂಡಿಗ ಪ್ರಭ್ಸಿಮ್ರಾನ್ ಸಿಂಗ್ ಕೇವಲ 34 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 69 ರನ್ ಬಾರಿಸಿದರು.
ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಶ್ರೇಯಸ್ ಅಯ್ಯರ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 52 ರನ್ ಚಚ್ಚಿದರು. ಈ ಮೂಲಕ 16.2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿತು.

ಕೊಲೆಯಾದ ನಿವೃತ್ತ ಐಪಿಎಸ್ ಓಂಪ್ರಕಾಶ್ ಫಾರ್ಮ್ ಹೌಸ್ ಹೇಗಿದೆ ನೋಡಿ...!

ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ

VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ

ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್
