VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
IPL 2025 CSK vs MI: ಚೆನ್ನೈನ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 155 ರನ್ ಕಲೆಹಾಕಿದರೆ, ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 19.1 ಓವರ್ಗಳಲ್ಲಿ ಚೇಸ್ ಮಾಡಿದೆ.
IPL 2025: ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದ ವೇಳೆ ಚೆನ್ನೈ ಸೂಪರ್ ಕಿಂಗ್ಸ್ (CSK) ಆಟಗಾರರು ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆಯೇ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ವೈರಲ್ ಆಗಿರುವ ವಿಡಿಯೋ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಸಿಎಸ್ಕೆ ತಂಡವು ಆರಂಭಿಕ ಯಶಸ್ಸು ಪಡೆದುಕೊಂಡಿತ್ತು. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಎಡಗೈ ವೇಗಿ ಖಲೀಲ್ ಅಹ್ಮದ್ ಬಳಿ ತೆರಳಿ ಅದೇನೋ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವಿಡಿಯೋದಲ್ಲಿ ಖಲೀಲ್ ಅಹ್ಮದ್ ಪ್ಯಾಂಟ್ ಜೇಬಿನಿಂದ ಅದೇನೋ ತೆಗೆಯುತ್ತಿರುವಂತೆ ಕಾಣಬಹುದು. ಅಲ್ಲದೆ ಆ ಬಳಿಕ ರುತುರಾಜ್ ಗಾಯಕ್ವಾಡ್ ಅವರಿಗೆ ಕೊಡುತ್ತಿದ್ದಂತೆ ಅವರು ಅದನ್ನು ಜೇಬಿನಲ್ಲಿರಿಸಿಕೊಂಡಿದ್ದಾರೆ.
ಇಬ್ಬರು ಆಟಗಾರರ ನಡುವೆ ಕದ್ದುಮುಚ್ಚಿ ನಡೆದಿರುವ ಎಕ್ಸ್ಚೇಂಜ್ ವಿಡಿಯೋ ಇದೀಗ ವೈರಲ್ ಆಗಿದ್ದು, ಅನೇಕರು ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಹಿಂದೆ ಫಿಕ್ಸಿಂಗ್ ಕಾರಣದಿಂದಾಗಿ 2 ವರ್ಷಗಳ ಕಾಲ ಬ್ಯಾನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚೆಂಡು ವಿರೂಪಗೊಳಿಸಿರುವ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಸಿಎಸ್ಕೆ ಫ್ರಾಂಚೈಸಿ ಏನು ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.