VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
IPL 2025 CSK vs MI: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 38ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 15.4 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 38ನೇ ಪಂದ್ಯವು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿತ್ತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದ ಮೂಲಕ ಆಯುಷ್ ಮ್ಹಾತ್ರೆ (Ayush Mhatre) ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಅತ್ತ ಅಣ್ಣ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಬ್ಯಾಟಿಂಗ್ಗೆ ಬರುತ್ತಿದ್ದಂತೆ, ಅಣ್ಣನ ಎಂಟ್ರಿಯನ್ನು ವೀಕ್ಷಿಸಲು ಕಾದು ಕುಳಿತಿದ್ದ ಕಸಿನ್ ತಮ್ಮ ಸ್ಟೇಡಿಯಂನಲ್ಲಿ ಬಿಕ್ಕಳಿಸಿ ಅಳಲಾರಂಭಿಸಿದರು. ಅಣ್ತತಮ್ಮನ ಪ್ರೀತಿಯನ್ನು ಸಾರುವ ಈ ಆನಂದಭಾಷ್ಪದ ವಿಡಿಯೋ ಇದೀಗ ಸಖತ್ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳನ್ನು ಪಡೆದುಕೊಳ್ಳುತ್ತಿದೆ.
ಇನ್ನು ಈ ಪಂದ್ಯದ ಮೂಲಕ ಸಿಎಸ್ಕೆ ಪರ ಪಾದಾರ್ಪಣೆ ಮಾಡಿದ 17 ವರ್ಷದ ಆಯುಷ್ ಮ್ಹಾತ್ರೆ 15 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 32 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಪಂದ್ಯದಲ್ಲಿ 20 ಓವರ್ಗಳಲ್ಲಿ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 15.4 ಓವರ್ಗಳಲ್ಲಿ 177 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.