Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
IPL 2025 KKR vs CSK: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 57ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 179 ರನ್ ಕಲೆಹಾಕಿತು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್ಗಳಲ್ಲಿ ಚೇಸ್ ಮಾಡಿ 2 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಐಪಿಎಲ್ನ 57ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ದಾಂಡಿಗ ಡೆವಾಲ್ಡ್ ಬ್ರೆವಿಸ್ (Dewald Brevis) ಸ್ಪೋಟಕ ಅರ್ಧಶತಕ ಬಾರಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 179 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಸಿಎಸ್ಕೆ ಪರ ಡೆವಾಲ್ಡ್ ಬ್ರೆವಿಸ್ 22 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಹಾಫ್ ಸೆಂಚುರಿ ಸಿಡಿಸಿದರು. ಈ ಅರ್ಧಶತಕದೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಪರ ಅತೀ ವೇಗವಾಗಿ ಅರ್ಧಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.
ಹಾಗೆಯೇ ಈ ಪಂದ್ಯದಲ್ಲಿ ವೈಭವ್ ಅರೋರಾ ಅವರ ಒಂದೇ ಓವರ್ನಲ್ಲಿ ಡೆವಾಲ್ಡ್ ಬ್ರೆವಿಸ್ 30 ರನ್ ಚಚ್ಚಿದ್ದರು. ಈ ಮೂಲಕ ಸಿಎಸ್ಕೆ ಪರ ಒಂದೇ ಓವರ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿದೇಶಿ ದಾಂಡಿಗ ಎಂಬ ಹೆಗ್ಗಳಿಕೆಯನ್ನು 22 ವರ್ಷದ ಡೆವಾಲ್ಡ್ ಬ್ರೆವಿಸ್ ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಬ್ರೆವಿಸ್ ಅವರ ಸ್ಪೋಟಕ ಅರ್ಧಶತಕದ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್ಗಳಲ್ಲಿ 183 ರನ್ ಬಾರಿಸಿ ಕೆಕೆಆರ್ ವಿರುದ್ಧ 2 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

