Dewald Brevis: ಚೊಚ್ಚಲ ಪಂದ್ಯದಲ್ಲೇ ಬೇಬಿ AB ಆರ್ಭಟ
IPL 2025 CSK vs SRH: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ 154 ರನ್ ಕಲೆಹಾಕಿದರೆ, ಈ ಗುರಿಯನ್ನು ಎಸ್ಆರ್ಹೆಚ್ 18.4 ಓವರ್ಗಳಲ್ಲಿ ಚೇಸ್ ಮಾಡಿದೆ.
IPL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬೇಬಿ ಎಬಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ (Dewald Brevis) ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬೇಬಿ ಎಬಿ ಐಪಿಎಲ್ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಬದಲಿ ಆಟಗಾರನಾಗಿ ಎಂಬುದು ವಿಶೇಷ.
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಗುರ್ಜಪ್ನೀತ್ ಸಿಂಗ್ ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ 2.2 ಕೋಟಿ ರೂ.ಗೆ ಡೆವಾಲ್ಡ್ ಬ್ರೆವಿಸ್ ಅವರನ್ನು ಸಿಎಸ್ಕೆ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸಿಎಸ್ಕೆ ಪರ ಚೊಚ್ಚಲ ಪಂದ್ಯವಾಡಿದ ಬ್ರೆವಿಸ್ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದಿದ್ದಾರೆ.
ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ 25 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 42 ರನ್ ಚಚ್ಚಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಸಿಎಸ್ಕೆ ಪರ ಗರಿಷ್ಠ ಸ್ಕೋರ್ಗಳಿಸಿದ್ದು ಕೂಡ ಬ್ರೆವಿಸ್. ಅಂದರೆ ಚೊಚ್ಚಲ ಮ್ಯಾಚ್ನಲ್ಲೇ ಕಮಾಲ್ ಮಾಡುವಲ್ಲಿ ಬೇಬಿ ಎಬಿ ಯಶಸ್ವಿಯಾಗಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 154 ರನ್ ಕಲೆಹಾಕಿದರೆ, ಈ ಗುರಿಯನ್ನು ಸನ್ರೈಸರ್ಸ್ ಹೈದರಾಬಾದ್ ತಂಡ 18.4 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಎಸ್ಆರ್ಹೆಚ್ ತಂಡ 5 ವಿಕೆಟ್ಗಳ ಗೆಲುವು ದಾಖಲಿಸಿದೆ.