Dewald Brevis: ಚೊಚ್ಚಲ ಪಂದ್ಯದಲ್ಲೇ ಬೇಬಿ AB ಆರ್ಭಟ

Updated on: Apr 26, 2025 | 10:57 AM

IPL 2025 CSK vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2025) 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 154 ರನ್ ಕಲೆಹಾಕಿದರೆ, ಈ ಗುರಿಯನ್ನು ಎಸ್​ಆರ್​ಹೆಚ್ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ.

IPL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬೇಬಿ ಎಬಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ (Dewald Brevis) ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬೇಬಿ ಎಬಿ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಬದಲಿ ಆಟಗಾರನಾಗಿ ಎಂಬುದು ವಿಶೇಷ.

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದ ಗುರ್ಜಪ್ನೀತ್ ಸಿಂಗ್ ಗಾಯಗೊಂಡು ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ 2.2 ಕೋಟಿ ರೂ.ಗೆ ಡೆವಾಲ್ಡ್ ಬ್ರೆವಿಸ್ ಅವರನ್ನು ಸಿಎಸ್​ಕೆ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸಿಎಸ್​ಕೆ ಪರ ಚೊಚ್ಚಲ ಪಂದ್ಯವಾಡಿದ ಬ್ರೆವಿಸ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದಿದ್ದಾರೆ.

ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ 25 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 42 ರನ್ ಚಚ್ಚಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ಪರ ಗರಿಷ್ಠ ಸ್ಕೋರ್​ಗಳಿಸಿದ್ದು ಕೂಡ ಬ್ರೆವಿಸ್. ಅಂದರೆ ಚೊಚ್ಚಲ ಮ್ಯಾಚ್​ನಲ್ಲೇ ಕಮಾಲ್ ಮಾಡುವಲ್ಲಿ ಬೇಬಿ ಎಬಿ ಯಶಸ್ವಿಯಾಗಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 154 ರನ್ ಕಲೆಹಾಕಿದರೆ, ಈ ಗುರಿಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಎಸ್​ಆರ್​​ಹೆಚ್ ತಂಡ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More