VIDEO: ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಬೇಬಿ AB
IPL 2025 CSK vs PBKS: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ಗಳಲ್ಲಿ 194 ರನ್ ಬಾರಿಸಿ 6 ವಿಕೆಟ್ಗಳ ಜಯ ಸಾಧಿಸಿದೆ.
ಬೇಬಿ ಎಬಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ (Dewald Brevis) ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಲ್ಲಿರುವುವುದು ಅತ್ಯದ್ಭುತ ಫೀಲ್ಡಿಂಗ್ನೊಂದಿಗೆ ಎಂಬುದು ವಿಶೇಷ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ನ (IPL 2025) 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬ್ಯಾಟರ್ ಶಶಾಂಕ್ ಸಿಂಗ್ ಬಾರಿಸಿದ ಚೆಂಡನ್ನು ಡೆವಾಲ್ಡ್ ಬ್ರೆವಿಸ್ ಬೌಂಡರಿ ಲೈನ್ನಲ್ಲಿ ಅದ್ಭುತವಾಗಿ ಹಿಡಿಯುವ ಮೂಲಕ ಇಡೀ ಪ್ರೇಕ್ಷಕರನ್ನು ನಿಬ್ಬೆರಗಾಗಿಸಿದ್ದಾರೆ. ಈ ಅದ್ಭುತ ಫೀಲ್ಡಿಂಗ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.4 ಓವರ್ಗಳಲ್ಲಿ 194 ರನ್ ಬಾರಿಸಿ 6 ವಿಕೆಟ್ಗಳ ವಿಜಯ ಸಾಧಿಸಿದೆ.