AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಟ್ ರೈಟ್ ರೈಟ್... ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್

ರೈಟ್ ರೈಟ್ ರೈಟ್… ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್

ಝಾಹಿರ್ ಯೂಸುಫ್
|

Updated on: May 05, 2025 | 9:32 AM

IPL 2025 PBKS vs LSG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 37 ರನ್​ಗಳ ಜಯ ಸಾಧಿಸಿದೆ.

IPL 2025: ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಥಿ (Digvesh Rathi) ನೋಟ್​ಬುಕ್ ಸೆಲೆಬ್ರೇಷನ್ ಮುಂದುವರೆದಿದೆ. ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಥಿ ಕಾಣಿಸಿಕೊಂಡಿದ್ದರು. ಅಲ್ಲದೆ ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದೀಗ ಮತ್ತೆ ನೋಟ್​ಬುಕ್ ಸೆಲೆಬ್ರೇಷನ್​ನೊಂದಿಗೆ ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ ಬೀಳ್ಕೊಡುಗೆ ನೀಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ವಿಕೆಟ್ ಪಡೆದ ದಿಗ್ವೇಶ್ ಎಂದಿನಂತೆ ನೋಟ್​ಬುಕ್ ಸಹಿಯೊಂದಿಗೆ ಸಂಭ್ರಮಿಸಿದರು. ಇದೀಗ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 236 ರನ್ ಕಲೆಹಾಕಿದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡ 37 ರನ್​ಗಳ ಜಯ ಸಾಧಿಸಿದೆ.