Sign In

By signing in or creating an account, you agree with Associated Broadcasting Company's Terms & Conditions and Privacy Policy.

Digvesh Rathi: ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ

Digvesh Rathi: ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ

ಝಾಹಿರ್ ಯೂಸುಫ್
|

Updated on: Apr 05, 2025 | 1:54 PM

IPL 2025 LSG vs MI: ಲಕ್ನೋದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ 12 ರನ್​ಗಳಿಂದ ಸೋಲನುಭವಿಸಿದೆ.

ಐಪಿಎಲ್​ನ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿದೆ. ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಗೆಲುವಿನ ರೂವಾರಿ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ. ಏಕೆಂದರೆ ಎಲ್​ಎಸ್​ಜಿ ನೀಡಿ 204 ರನ್​ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಉತ್ತಮ ಆರಂಭ ಪಡೆದಿತ್ತು.

ಆದರೆ ದಿಗ್ವೇಶ್ ರಾಠಿ ಸ್ಪಿನ್​ನಲ್ಲಿ ರನ್​ಗಳಿಸಲು ಪರದಾಡಿದರು. 4 ಓವರ್​ಗಳನ್ನು ಎಸೆದ ದಿಗ್ವೇಶ್ ನೀಡಿದ್ದು ಕೇವಲ 21 ರನ್​ಗಳು ಮಾತ್ರ. ಅಲ್ಲದೆ 1 ವಿಕೆಟ್ ಕೂಡ ಪಡೆದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದ ರನ್​ ಗತಿಯನ್ನು ನಿಯಂತ್ರಿಸುವಲ್ಲಿ ದಿಗ್ವೇಶ್ ರಾಠಿ ಪ್ರಮುಖ ಪಾತ್ರವಹಿಸಿದರು.

ವಿಶೇಷ ಎಂದರೆ ಈ ಪಂದ್ಯದಲ್ಲಿ ನಮನ್ ಧೀರ್ ಅವರನ್ನು ದಿಗ್ವೇಶ್ ರಾಠಿ ಕ್ಲೀನ್ ಬೌಲ್ಡ್ ಮಾಡಿ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದರು. ಈ ಸಂಭ್ರಮಕ್ಕೆ ಇದೀಗ ದಂಡದ ಶಿಕ್ಷೆ ನೀಡಲಾಗಿದೆ. ಅದರಂತೆ ರಾಠಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿದೆ.

ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ದಿಗ್ವೇಶ್ ರಾಠಿ ನೋಟ್​ಬುಕ್ ಸೆಲೆಬ್ರೇಷನ್ ಮಾಡಿದ್ದರು. ಐಪಿಎಲ್​ನ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದ್ದಕ್ಕಾಗಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಇದೀಗ ಮತ್ತದೇ ತಪ್ಪನ್ನು ಪುನರಾವರ್ತಿಸಿರುವ ದಿಗ್ವೇಶ್ ರಾಠಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಇದಾಗ್ಯೂ ಈ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ದಿಗ್ವೇಶ್ ರಾಠಿ ಪಡೆದುಕೊಂಡಿರುವುದು ವಿಶೇಷ.