VIDEO: ಚಮೀರ… ಚಮೀರ… ಚಮೀರ… ಇದು ದುಷ್ಮಂತನ ಕ್ಯಾಚ್
IPL 2025 DC vs KKR: ಐಪಿಎಲ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಗ್ಗರಿಸಿದೆ. ದೆಹಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 204 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 190 ರನ್ಗಳಿಸಲಷ್ಟೇ ಶಕ್ತರಾದರು.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದು ದುಷ್ಮಂತ ಚಮೀರ (Dushmantha Chameera) ಇಡೀ ಪ್ರೇಕ್ಷಕರನ್ನು ನಿಬ್ಬೆರಗಾಗಿಸಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಇದರ ನಡುವೆ 20ನೇ ಓವರ್ನಲ್ಲಿ ಬೌಂಡರಿ ಲೈನ್ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ ದುಷ್ಮಂತ ಚಮೀರಾ ಇಡೀ ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿಸಿದರು.
ಮಿಚೆಲ್ ಸ್ಟಾರ್ಕ್ ಎಸೆದ ಕೊನೆಯ ಓವರ್ನ 4ನೇ ಎಸೆತವನ್ನು ಅನುಕುಲ್ ರಾಯ್ ಬ್ಯಾಕ್ವರ್ಡ್ ಸ್ಕ್ವೇರ್ ಲೆಗ್ ಬೌಂಡರಿಯತ್ತ ಬಾರಿಸಿದ್ದರು. ಈ ವೇಳೆ ಅಲ್ಲೇ ಫೀಲ್ಡಿಂಗ್ನಲ್ಲಿದ್ದ ದುಷ್ಮಂತ ಚಮೀರ ಓಡಿ ಬಂದು ಅತ್ಯದ್ಭುತವಾಗಿ ಡೈವಿಂಗ್ ಕ್ಯಾಚ್ ಹಿಡಿದರು. ಈ ಸ್ಟನ್ನಿಂಗ್ ಕ್ಯಾಚ್ ವಿಡಿಯೋ ಇದೀಗ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 204 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 190 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೆಕೆಆರ್ ತಂಡವು 14 ರನ್ಗಳ ಜಯ ಸಾಧಿಸಿದೆ.
Published on: Apr 30, 2025 09:55 AM
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

