VIDEO: ನಾನೇನು ಮಾಡ್ದೆ… ಕೆಎಲ್ ರಾಹುಲ್ ಜೊತೆ ವಿರಾಟ್ ಕೊಹ್ಲಿ ಕಿರಿಕ್

Updated on: Apr 28, 2025 | 6:59 AM

IPL 2025 RCB vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 46ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18.3 ಓವರ್​ಗಳಲ್ಲಿ ಗುರಿ ತಲುಪಿ 6 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 46ನೇ ಪಂದ್ಯದಲ್ಲಿ  ವಿರಾಟ್ ಕೊಹ್ಲಿ (Virat Kohli) ಹಾಗೂ ಕೆಎಲ್ ರಾಹುಲ್ (KL Rahul) ನಡುವೆ ವಾಕ್ಸಮರ ನಡೆದಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪರ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.  ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೀಲ್ಡಿಂಗ್​ ನಿಲ್ಲಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದರು. ಅದರಲ್ಲೂ ಕೆಎಲ್ ರಾಹುಲ್ ಫೀಲ್ಡಿಂಗ್​ ಸೆಟ್ಟಿಂಗ್​ನಲ್ಲಿ ಪದೇ ಪದೇ ಬದಲಾವಣೆ ಮಾಡುತ್ತಿರುವುದು ಕಂಡು ಬಂತು.

ಇದರಿಂದ ಆಕ್ರೋಶಗೊಂಡ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ರಾಹುಲ್ ನಾನೇನು ಮಾಡಿದೆ, ಱಂಪೈರ್ ನೋಡಿಕೊಳ್ಳುತ್ತಾರೆ ಎಂದು ಪ್ರತ್ಯುತ್ತರ ನೀಡಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ನಡುವಣ ವಿಡಿಯೋ ವೈರಲ್ ಆಗಿದೆ. ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಅವರನ್ನು ಗುರಿಯಾಗಿಸಿ ಸಂಭ್ರಮಿಸಿದ್ದರು. ಇದೀಗ ಕೆಎಲ್ ರಾಹುಲ್ ಜೊತೆ ಕಿರಿಕ್ ಮಾಡಿಕೊಂಡು ವಿರಾಟ್ ಕೊಹ್ಲಿ ಸುದ್ದಿಯಾಗಿದ್ದಾರೆ.

Published on: Apr 28, 2025 06:58 AM