VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ… ಕುಣಿದು ಕುಪ್ಪಳಿಸಿದ RCB ಫ್ಯಾನ್ಸ್
IPL 2025 Final RCB vs PBKS: ಐಪಿಎಲ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 184 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ರೋಚಕ ಜಯದೊಂದಿಗೆ ಆರ್ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಆರ್ಸಿಬಿ ಅಭಿಮಾನಿಗಳು ರಂಗಕ್ಕೆ ಇಳಿದಿದ್ದಾರೆ. ಅದು ಕೂಡ ಸಖತ್ ಸಂಭ್ರಮದೊಂದಿಗೆ ಎಂಬುದು ವಿಶೇಷ. 17 ವರ್ಷಗಳ ಕಾಯುವಿಕೆ ಅಂತ್ಯಗೊಳ್ಳುತ್ತಿದ್ದಂತೆ ರಸ್ತೆಗೆ ಇಳಿದ ಅಭಿಮಾನಿಗಳು ಈ ಸಲ ಕಪ್ ನಮ್ದು ಎನ್ನುವ ಮೂಲಕ ಘೋಷವಾಕ್ಯದೊಂದಿಗೆ ಸಂಭ್ರಮಿಸಿದರು.
ಈ ಸಂಭ್ರಮ ಕೇವಲ ಬೆಂಗಳೂರಿನಲ್ಲಿ ಮಾತ್ರ ಕಂಡು ಬಂದಿಲ್ಲ. ರಾಜ್ಯದ ಎಲ್ಲೆಡೆಯು ಆರ್ಸಿಬಿ ಅಭಿಮಾನಿಗಳು ಪಟಾಕಿ ಸಿಡಿಸುವ ಮೂಲಕ, ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಕುಣಿದು ಕುಪ್ಪಳಿಸಿದರು. ಅತ್ತ ಹೈದರಾಬಾದ್, ಲಕ್ನೋನಲ್ಲೂ ಆರ್ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಇದೀಗ ರಾಯಲ್ ಅಭಿಮಾನಿಗಳ ರಾಯಲ್ ಸಂಭ್ರಮದ ವಿಡಿಯೋ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 184 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಆರ್ಸಿಬಿ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.