Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು

IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು

ಝಾಹಿರ್ ಯೂಸುಫ್
|

Updated on: Mar 15, 2025 | 10:53 AM

IPL 2025: ಐಪಿಎಲ್​ 2025 ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ಒಂದು ವಾರ ಮಾತ್ರ ಉಳಿದಿದೆ. ಇದಾಗ್ಯೂ ಎಲ್ಲಾ ಆಟಗಾರರು ತಮ್ಮ ತಂಡಗಳನ್ನು ಕೂಡಿಕೊಂಡಿಲ್ಲ. ಅದರಲ್ಲೂ ಕೆಲ ಭಾರತೀಯ ಆಟಗಾರರು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಕ್ಲಿಯರೆನ್ಸ್​ಗಾಗಿ ಕಸರತ್ತು ನಡೆಸುತ್ತಿದ್ದಾರೆ.
ಬಿಸಿಸಿಐ ನಿಯಮಗಳ ಪ್ರಕಾರ, ಗಾಯಗೊಂಡ ಭಾರತೀಯ ಅಟಗಾರರು ಎನ್​​ಸಿಎ ಕಡೆಯಿಂದ ಫಿಟ್​ನೆಸ್ ಕ್ಲಿಯರೆನ್ಸ್ ಪಡೆಯಲೇಬೇಕು. ಅದರಂತೆ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್, ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಆಟಗಾರರು ಎನ್​ಸಿಎಯಲ್ಲಿದ್ದಾರೆ. ಈ ಕುರಿತಾದ ಸ್ಪೆಷಲ್ ರಿಪೋರ್ಟ್ ಇಲ್ಲಿದೆ.