VIDEO: ಪವರ್ಪ್ಲೇನಲ್ಲೇ 3 ಕ್ಯಾಚ್ ಕೈಚೆಲ್ಲಿದ ಗುಜರಾತ್ ಟೈಟಾನ್ಸ್
IPL 2025 MI vs GT: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಇನಿಂಗ್ಸ್ಗೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 19 ಓವರ್ಗಳಲ್ಲಿ 147 ರನ್ಗಳ ಗುರಿ ನೀಡಲಾಗಿತ್ತು.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಫೀಲ್ಡರ್ಗಳು ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಪವರ್ಪ್ಲೇನಲ್ಲೇ ಮೂರು ಸುಲಭ ಕ್ಯಾಚ್ಗಳನ್ನು ಕೈಚೆಲ್ಲುವ ಮೂಲಕ ಎಂಬುದೇ ಅಚ್ಚರಿ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದ ಮೊದಲ ಇನಿಂಗ್ಸ್ನ ಮೂರನೇ ಎಸೆತದಲ್ಲಿ ಸಾಯಿ ಸುದರ್ಶನ್ ವಿಲ್ ಜಾಕ್ಸ್ ಕ್ಯಾಚ್ ಕೈಚೆಲ್ಲಿದ್ದರು. ಇದಾದ ಬಳಿಕ 5ನೇ ಓವರ್ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಕ್ಯಾಚ್ ಹಿಡಿಯುವಲ್ಲಿ ಸಾಯಿ ಕಿಶೋರ್ ವಿಫಲರಾದರು. ಇನ್ನು 6ನೇ ಓವರ್ನ 5ನೇ ಎಸೆತದಲ್ಲಿ ಮೊಹಮ್ಮದ್ ಸಿರಾಜ್ ವಿಲ್ ಜಾಕ್ಸ್ ಅವರ ಕ್ಯಾಚ್ ಕೈಬಿಟ್ಟರು.
ಹೀಗೆ ಬ್ಯಾಕ್ ಟು ಬ್ಯಾಕ್ ಮೂರು ಕ್ಯಾಚ್ಗಳನ್ನು ಕೈಚೆಲ್ಲಿರುವುದನ್ನು ನೋಡಿ ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ ಆಕ್ರೋಶಭರಿತರಾಗಿದ್ದರು. ಅಲ್ಲದೆ ಡಗೌಟ್ನಿಂದಲೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಇದೀಗ ಜಿಟಿ ಪಡೆಯ ಕಳಪೆ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಇನಿಂಗ್ಸ್ಗೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 19 ಓವರ್ಗಳಲ್ಲಿ 147 ರನ್ಗಳ ಗುರಿ ನೀಡಲಾಗಿತ್ತು. ಕೊನೆಯ ಎಸೆತದಲ್ಲಿ ಈ ಗುರಿ ಮುಟ್ಟುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.

ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು

ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
