VIDEO: ಶ್ರೇಯಸ್ ಅಯ್ಯರ್ಗೆ ಹಾರ್ದಿಕ್ ಪಾಂಡ್ಯ ಶೇಕ್ ಹ್ಯಾಂಡ್ ನೀಡಿಲ್ವಾ?
IPL 2025 PBKS vs MI: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 69ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 18.3 ಓವರ್ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನ 69ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲುವು ದಾಖಲಿಸಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್ಗಳಲ್ಲಿ 184 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 18.3 ಓವರ್ಗಳಲ್ಲಿ 187 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೇಯಸ್ ಅಯ್ಯರ್ ಅವರಿಗೆ ಹಸ್ತಲಾಘವ ಮಾಡದೇ ಹೊರನಡೆದಿದ್ದಾರೆ ಎಂಬ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರಿಗೂ ಶೇಕ್ ಹ್ಯಾಂಡ್ ನೀಡಿದರೂ ಅಯ್ಯರ್ ಹಾಗೂ ನೆಹಾಲ್ ವಧೇರಾ ಅವರನ್ನು ಪಾಂಡ್ಯ ನಿರ್ಲಕ್ಷಿಸುತ್ತಿರುವ ವಿಡಿಯೋದಲ್ಲಿ ಕಾಣಬಹುದು.
ಈ ವಿಡಿಯೋ ವೈರಲ್ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪರ – ವಿರೋಧ ಚರ್ಚೆಗಳು ಶುರುವಾಗಿದೆ. ಹಾರ್ದಿಕ್ ಪಾಂಡ್ಯ ಮೊದಲು ಶ್ರೇಯಸ್ ಅಯ್ಯರ್ ಹಾಗೂ ನೆಹಾಲ್ಗೆ ಶೇಕ್ ಹ್ಯಾಂಡ್ ನೀಡಿದ್ದಾರೆ. ಹೀಗಾಗಿ ಮತ್ತೊಮ್ಮೆ ಹಸ್ತಲಾಘವ ಮಾಡಲು ಮುಂದಾಗಲಿಲ್ಲ ಎಂದು ಕೆಲವರು ವಾದಿಸಿದರೆ, ಇನ್ನು ಕೆಲವರು ಹಾರ್ದಿಕ್ ನಡೆಗೆ ಆಕ್ರೋಶಗಳನ್ನು ಹೊರಹಾಕಿದ್ದಾರೆ.

