VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
IPL 2025 MI vs DC: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 63ನೇ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18.2 ಓವರ್ಗಳಲ್ಲಿ 121 ರನ್ಗ:ಳಿಸಿ 59 ರನ್ಗಳಿಂದ ಸೋಲೊಪ್ಪಿಕೊಂಡಿದೆ.
ಐಪಿಎಲ್ನ 63ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ (MI) ತಂಡವು ಪ್ಲೇಆಪ್ಗೆ ಪ್ರವೇಶಿಸಿದೆ. ರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 180 ರನ್ ಕಲೆಹಾಕಿತು. ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಗುರಿಯನ್ನು ಬೆನ್ನತ್ತುವ ವಿಶ್ವಾಸದೊಂದಿಗೆ ಕಣಕ್ಕಿಳಿದಿತ್ತು.
ಆದರೆ ಹಾರ್ದಿಕ್ ಪಾಂಡ್ಯರ ಚಾಣಾಕ್ಷ ನಾಯಕತ್ವದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಯಿತು. ಅದರಲ್ಲೂ ಪದೇ ಪಡೇ ಬೌಲರ್ಗಳನ್ನು ಬದಲಿಸುವ ಮೂಲಕ ಪಾಂಡ್ಯ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಇದರ ನಡುವೆ ಬಂದ ವಿಪ್ರಾಜ್ ನಿಗಮ್ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಗಮನ ಸೆಳೆದರು.
ಈ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಚೆಂಡನ್ನು ಮಿಚೆಲ್ ಸ್ಯಾಂಟ್ನರ್ ಅವರ ಕೈಗಿತ್ತರು. ನಿರೀಕ್ಷೆಯಂತೆ ಸ್ಯಾಂಟ್ನರ್ ಎಸೆತದಲ್ಲಿ ವಿಪ್ರಾಜ್ ಕ್ಯಾಚ್ ನೀಡಿದ್ದರು. ಆದರೆ ಈ ಸುಲಭ ಕ್ಯಾಚ್ ಹಿಡಿಯುವಲ್ಲಿ ರೋಹಿತ್ ಶರ್ಮಾ ವಿಫಲರಾದರು. ಇತ್ತ ಕ್ಯಾಚ್ ಕೈ ಬಿಟ್ಟ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಇಂಪ್ಯಾಕ್ಟ್ ಸಬ್ ಆಗಿ ಕರಣ್ ಶರ್ಮಾ ಅವರನ್ನು ಕಣಕ್ಕಿಳಿಸುವ ಮೂಲಕ ರೋಹಿತ್ ಶರ್ಮಾ ಅವರನ್ನು ಪೆವಿಲಿಯನ್ಗೆ ಕಳುಹಿಸಿದರು.
ಇದೀಗ ರೋಹಿತ್ ಶರ್ಮಾ ಅವರ ಕಳಪೆ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದೆ. ಇನ್ನು ಈ ಪಂದ್ಯದಲ್ಲಿ 181 ರನ್ಗಳ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 121 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 59 ರನ್ಗಳ ಭರ್ಜರಿ ಜಯ ಸಾಧಿಸಿದೆ.
ದೆಹಲಿ ಸ್ಫೋಟಕ್ಕೂ ಮುನ್ನ ಮಸೀದಿ ಹೊರಗೆ ಉಗ್ರ ಉಮರ್ ಸುತ್ತಾಡಿದ್ದ
ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ, ಪರಿಶೀಲಿಸಿದ ಪೊಲೀಸರಿಗೇ ಆಘಾತ!
ಪಿಕ್ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್

