VIDEO: ಇದೆಂತಹ ವರ್ತನೆ… ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
IPL 2025 SRH vs MI: ಐಪಿಎಲ್ 2025ರ 41ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 143 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 15.4 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ 7 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 41ನೇ ಪಂದ್ಯದ ಆರಂಭಕ್ಕೂ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗಾಗಿ ಒಂದು ನಿಮಿಷ ಮೌನಾಚರಣೆ ಮಾಡಲಾಗಿತ್ತು. ಈ ಮೌನಾಚರಣೆ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಅಗೌರವಯುತವಾಗಿ ನಡೆದುಕೊಂಡಿದ್ದು ಇದೀಗ ಚರ್ಚೆಗೆ ಕಾರಣವಾಗಿದೆ.
ಎಲ್ಲರೂ ಮೌನಾಚರಣೆಗಾಗಿ ನಿಂತಿದ್ದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ನಗುತ್ತಾ ಸಹ ಆಟಗಾರರೊಂದಿಗೆ ಹರಟೆ ಹೊಡೆಯುತ್ತಿದ್ದರು. ಇದಾದ ಬಳಿಕ ಮೌನಾಚರಣೆ ಶುರುವಾಗಿದೆ. ಈ ವೇಳೆಯೂ ಹಾರ್ದಿಕ್ ಪಾಂಡ್ಯ ತಮ್ಮ ವರ್ತನೆಯಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿರಲಿಲ್ಲ.
ತನ್ನ ಪ್ಯಾಂಟ್ ಲೇಸ್ ಟೈಟ್ ಮಾಡಿಕೊಳ್ಳುತ್ತಾ ನಿಂತಿದ್ದ ಹಾರ್ದಿಕ್ ಪಾಂಡ್ಯ ಪಕ್ಕದಲ್ಲಿದ್ದ ಅಂಪೈರ್ ಜೊತೆ ಹರಟೆ ಮುಂದುವರೆಸಿದ್ದರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಸೂಕ್ಷ್ಮ ಸಂದರ್ಭಗಳಲ್ಲಿ ಮೃತರಿಗೆ ಅಗೌರವ ತೋರಿರುವ ಹಾರ್ದಿಕ್ ಪಾಂಡ್ಯ ನಡೆಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡ 20 ಓವರ್ಗಳಲ್ಲಿ 143 ರನ್ ಕಲೆಹಾಕಿತು. 144 ರನ್ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡ 15.4 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಮುಂಬೈ ಪಡೆ 7 ವಿಕೆಟ್ಗಳ ಜಯ ಸಾಧಿಸಿದೆ.