Jasprit Bumrah: ಜಸ್ಪ್ರೀತ್ ಬುಮ್ರಾ ಎಂಟ್ರಿ: RCB ಗೆ ಟೆನ್ಶನ್ ಶುರು
IPL 2025 Jasprit Bumrah: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಜಸ್ಪ್ರೀತ್ ಬುಮ್ರಾ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಐಪಿಎಲ್ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಫಿಟ್ನೆಸ್ ಸಮಸ್ಯೆಯ ಕಾರಣ ಬುಮ್ರಾ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದ ಜಸ್ಪ್ರೀತ್ ಬುಮ್ರಾ (Jasprit Bumrah) ಇದೀಗ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾ ಮುಂಬೈ ಇಂಡಿಯನ್ಸ್ ತಂಡದ ಮೊದಲ 4 ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ಅವರು ಕಂಬ್ಯಾಕ್ ಮಾಡಿದ್ದು, ಅದರಂತೆ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂಬುದು ವಿಶೇಷ. ಅಂದರೆ ಆರ್ಸಿಬಿ ವಿರುದ್ಧದ ಪಂದ್ಯದ ಮೂಲಕ ಬೂಮ್ ಬೂಮ್ ಎಂಟ್ರಿ ಕೊಡಲಿರುವುದು ಬಹುತೇಕ ಖಚಿತ. ಅತ್ತ ಈ ಪಂದ್ಯವು ಮುಂಬೈ ಇಂಡಿಯನ್ಸ್ ತಂಡದ ತವರು ಮೈದಾನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಹೀಗಾಗಿ ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ.
ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಆರ್ಸಿಬಿ ತಂಡಕ್ಕೆ ಗೆಲುವು ಅನಿವಾರ್ಯ. ಆದರೀಗ ಮುಂಬೈ ಇಂಡಿಯನ್ಸ್ ಪಡೆಗೆ ಜಸ್ಪ್ರೀತ್ ಬುಮ್ರಾ ಎಂಟ್ರಿ ಕೊಟ್ಟಿರುವುದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲುವು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಏಪ್ರಿಲ್ 7 ರಂದು ನಡೆಯಲಿರುವ ಆರ್ಸಿಬಿ-ಎಂಐ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ

Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು

ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ

ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
