VIDEO: ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್ಪ್ರೀತ್ ಬುಮ್ರಾ
IPL 2025 MI vs SRH: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 41ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 143 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 15.4 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಗೆಲುವು ದಾಖಲಿಸಿದೆ.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ತೋರಿದ ವರ್ತನೆಗೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂತಹದೊಂದು ಆಕ್ರೋಶಕ್ಕೆ ಮುಖ್ಯ ಕಾರಣ ಕ್ರೀಡಾ ಸ್ಪೂರ್ತಿ ಮೆರೆಯದಿರುವುದು.
ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ಪರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕನ್ನಡಿಗ ಆಭಿನವ್ ಮನೋಹರ್ ಕಣಕ್ಕಿಳಿದಿದ್ದರು.
19ನೇ ಓವರ್ನಲ್ಲಿ ದಾಳಿ ಸಂಘಟಿಸಿದ ಜಸ್ಪ್ರೀತ್ ಬುಮ್ರಾ ಯಾರ್ಕರ್ ಎಸೆಯಲು ಪ್ರಯತ್ನಿಸುತ್ತಿದ್ದರು. ಆದರೆ ಚೆಂಡು ಫುಲ್ ಟಾಸ್ ಆಗಿ ನೇರವಾಗಿ ಅಭಿನವ್ ಮನೋಹರ್ ಅವರ ಹೊಟ್ಟೆಯ ಕೆಳಗೆ ಬಡಿದಿದೆ. ನೋವಿನಿಂದಾಗಿ ಬ್ಯಾಟ್ಸ್ಮನ್ ತಕ್ಷಣವೇ ಕುಸಿದು ಬಿದ್ದರು.
ಬ್ಯಾಟರ್ ನೆಲಕ್ಕೆ ಬಿದ್ದರೂ, ಜಸ್ಪ್ರೀತ್ ಬುಮ್ರಾ ಆತನ ಬಳಿ ತೆರಳಿರಲಿಲ್ಲ. ಅಷ್ಟೇ ಅಲ್ಲದೆ ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಕ್ಷಮೆ ಕೇಳಿರಲಿಲ್ಲ. ಬದಲಾಗಿ ಮತ್ತೆ ಬೌಲಿಂಗ್ ಮಾಡಲು ಹಿಂತಿರುಗಿದ್ದರು. ಜಸ್ಪ್ರೀತ್ ಬುಮ್ರಾ ಅವರ ಈ ವರ್ತನೆಗೆ ಕಾಮೆಂಟೇಟರ್ಗಳು ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಇದೀಗ ಜಸ್ಪ್ರೀತ್ ಬುಮ್ರಾ ಯುವ ಆಟಗಾರನೊಂದಿಗೆ ನಡೆದುಕೊಂಡ ರೀತಿಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಗಳು ವ್ಯಕ್ತವಾಗುತ್ತಿದೆ. ಅಲ್ಲದೆ ಅನೇಕು ಬುಮ್ರಾ ವರ್ತನೆಯನ್ನು ಟೀಕಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 143 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು ಈ ಗುರಿಯನ್ನು 15.4 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.