AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್

VIDEO: ಕಮಿಂದು ಕಮಾಲ್… ವಾಟ್ ಎ ಕ್ಯಾಚ್

ಝಾಹಿರ್ ಯೂಸುಫ್
|

Updated on: Apr 26, 2025 | 9:55 AM

Share

IPL 2025 CSK vs SRH: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2025) 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 154 ರನ್ ಕಲೆಹಾಕಿದರೆ, ಈ ಗುರಿಯನ್ನು ಎಸ್​ಆರ್​ಹೆಚ್ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ತಂಡದ ಆಟಗಾರ ಕಮಿಂದು ಮೆಂಡಿಸ್ (Kamindu Mendis) ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಪರ ಡೆವಾಲ್ಡ್ ಬ್ರೆವಿಸ್ ಸ್ಪೋಟಕ ಇನಿಂಗ್ಸ್ ಆಡಿದ್ದರು.

ಭರ್ಜರಿ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ್ದ ಬ್ರೆವಿಸ್ 13ನೇ ಓವರ್​ನ 5ನೇ ಎಸೆತದಲ್ಲಿ ಲಾಂಗ್ ಆಫ್​ನತ್ತ ಬಾರಿಸಿದ್ದರು. ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ಕಮಿಂದು ಮೆಂಡಿಸ್ ಅದ್ಭುತ ಡೈವಿಂಗ್​ನೊಂದಿಗೆ ಕ್ಯಾಚ್ ಹಿಡಿದರು.  ಶ್ರೀಲಂಕಾ ಆಟಗಾರ ಹಿಡಿದ ಈ ಅದ್ಭುತ ಕ್ಯಾಚ್ ನೋಡಿ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಕಮಿಂದು ಮೆಂಡಿಸ್ ಅವರ ಕಮಾಲ್​ ಕ್ಯಾಚ್ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್​ಗಳಲ್ಲಿ 154 ರನ್ ಕಲೆಹಾಕಿ ಆಲೌಟ್ ಆದರೆ, ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 18.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 5 ವಿಕೆಟ್​ಗಳ ಜಯ ಸಾಧಿಸಿದೆ.

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More