ಆಕ್ರೋಶ… ಆವೇಶ… ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
IPL 2025 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ (ಐಪಿಎಲ್ 2025) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ.
IPL 2025: ಐಪಿಎಲ್ನ 52ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ (Virat Kohli) ಕ್ಯಾಚ್ ಹಿಡಿದ ಬಳಿಕ ಸಿಎಸ್ಕೆ ತಂಡದ ಆಟಗಾರ ಖಲೀಲ್ ಅಹ್ಮದ್ (Khaleel Ahmed) ಆಕ್ರೋಶಭರಿತರಾಗಿ ಸಂಭ್ರಮಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಖಲೀಲ್ ಅಹ್ಮದ್ ಅವರ ಒಂದೇ ಓವರ್ನಲ್ಲಿ ವಿರಾಟ್ ಕೊಹ್ಲಿ ಬ್ಯಾಕ್ ಟು ಬ್ಯಾಕ್ 2 ಸಿಕ್ಸ್ ಬಾರಿಸಿ ಅಬ್ಬರಿಸಿದ್ದರು.
ವಿರಾಟ್ ಕೊಹ್ಲಿಯ ಆರ್ಭಟದಿಂದಾಗಿ ಲಯ ತಪ್ಪಿದ್ದ ಖಲೀಲ್ ಅಹ್ಮದ್ ಆ ಬಳಿಕ ಓವರ್ ಎಸೆದಿರಲಿಲ್ಲ. ಇದರ ನಡುವೆ ಸ್ಯಾಮ್ ಕರನ್ ಎಸೆದ 12ನೇ ಓವರ್ನಲ್ಲಿ ಕೊಹ್ಲಿ ಕ್ಯಾಚ್ ನೀಡಿದ್ದಾರೆ. ಈ ಕ್ಯಾಚ್ ಹಿಡಿದ ಬಳಿಕ ಖಲೀಲ್ ಅಹ್ಮದ್ ಆಕ್ರೋಶಭರಿತರಾಗಿ ಚೆಂಡನ್ನು ನೆಲಕ್ಕೆ ಎಸೆಯುವ ಮೂಲಕ ಸಂಭ್ರಮಿಸಿದರು. ಇದೀಗ ಸಿಎಸ್ಕೆ ವೇಗಿಯ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 2 ರನ್ಗಳ ರೋಚಕ ಜಯ ಸಾಧಿಸಿದೆ.
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

