AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್‌ನಲ್ಲಿ 4ನೇ ವೇಗದ ಅರ್ಧಶತಕ ಸಿಡಿಸಿದ ರಹಾನೆ; ವಿಡಿಯೋ ನೋಡಿ

IPL 2025: ಐಪಿಎಲ್‌ನಲ್ಲಿ 4ನೇ ವೇಗದ ಅರ್ಧಶತಕ ಸಿಡಿಸಿದ ರಹಾನೆ; ವಿಡಿಯೋ ನೋಡಿ

ಪೃಥ್ವಿಶಂಕರ
|

Updated on: Apr 08, 2025 | 7:56 PM

Ajinkya Rahane's Fiery 26-Ball Fifty: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025ರ 21ನೇ ಪಂದ್ಯದಲ್ಲಿ ಕೆಕೆಆರ್ ತಂಡ ಲಕ್ನೋ ವಿರುದ್ಧ ಸೋಲುಂಡಿದೆ. ಆದಾಗ್ಯೂ ಈ ಪಂದ್ಯದಲ್ಲಿ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇದು ಐಪಿಎಲ್ 2025ರಲ್ಲಿ ರಹಾನೆ ಸಿಡಿಸಿದ ಎರಡನೇ ಅರ್ಧಶತಕವಾದರೆ, ಅವರ ವೃತ್ತಿಜೀವನದ ನಾಲ್ಕನೇ ಅತಿ ವೇಗದ ಅರ್ಧಶತಕವಾಗಿದೆ.

ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2025 ರ 21ನೇ ಪಂದ್ಯದಲ್ಲಿ ಆತಿಥೇಯ ಕೆಕೆಆರ್ ತಂಡಕ್ಕೆ ಸೋಲಾಗಿದೆ. ಆದಾಗ್ಯೂ ಲಕ್ನೋ ನೀಡಿದ 238 ರನ್​ಗಳ ಗುರಿ ಬೆನ್ನಟ್ಟಿದ ಕೆಕೆಆರ್ ಕೊನೆಯ ಎಸೆತದವರೆಗೂ ಗೆಲುವಿಗಾಗಿ ಕೋರಾಟ ನೀಡಿತ್ತಾದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ತಂಡದ ಪರ ನಾಯಕನ ಇನ್ನಿಂಗ್ಸ್ ಆಡಿದ ರಹಾನೆ ಬಿರುಗಾಳಿಯ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಎರಡನೇ ವಿಕೆಟ್‌ಗೆ ಸುನಿಲ್ ನರೈನ್ ಜೊತೆ ರಹಾನೆ ಅರ್ಧಶತಕದ ಜೊತೆಯಾಟವಾಡಿದರು.

ಲಕ್ನೋ ಸೂಪರ್ ಜೈಂಟ್ಸ್ ನೀಡಿದ 239 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕೆಕೆಆರ್​ಗೆ ಉತ್ತಮ ಆರಂಭ ಸಿಕ್ಕಿತು. ಕ್ವಿಂಟನ್ ಡಿ ಕಾಕ್ ಮತ್ತು ಸುನಿಲ್ ನರೈನ್ ಮೊದಲ ವಿಕೆಟ್‌ಗೆ ಕೇವಲ 2.3 ಓವರ್‌ಗಳಲ್ಲಿ 37 ರನ್‌ಗಳನ್ನು ಸೇರಿಸಿದರು. ಡಿ ಕಾಕ್ 15 ರನ್ ಗಳಿಸಿ ಔಟಾದರು, ನರೈನ್ ಕೇವಲ 13 ಎಸೆತಗಳಲ್ಲಿ 30 ರನ್ ಗಳಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ನಾಯಕ ರಹಾನೆ ಮತ್ತು ನರೈನ್ ಎರಡನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟ ನಡೆಸಿದರು. ಆರಂಭದಿಂದಲೂ ರಹಾನೆ ಉತ್ತಮ ಲಯದಲ್ಲಿ ಕಾಣಿಸಿಕೊಂಡು ಲಕ್ನೋ ಬೌಲರ್‌ಗಳನ್ನು ಸರಿಯಾಗಿ ದಂಡಿಸಿದರು.

ಹೀಗಾಗಿ ರಹಾನೆ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 35 ಎಸೆತಗಳನ್ನು ಎದುರಿಸಿದ ರಹಾನೆ 61 ರನ್ ಗಳಿಸಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದರು. ಮೂರನೇ ವಿಕೆಟ್‌ಗೆ ರಹಾನೆ ಮತ್ತು ವೆಂಕಟೇಶ್ ಅಯ್ಯರ್ 71 ರನ್‌ಗಳ ಜೊತೆಯಾಟ ನೀಡಿದರು. ಐಪಿಎಲ್ 2025 ರಲ್ಲಿ ರಹಾನೆ ಬ್ಯಾಟ್‌ನಿಂದ ಸಿಡಿಸಿದ ಎರಡನೇ ಅರ್ಧಶತಕ ಇದಾಗಿದೆ. ಅಲ್ಲದೆ ರಹಾನೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ನಾಲ್ಕನೇ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದರು.