VIDEO: ಧೋನಿ ಮಾತಿಗೆ ಬೆಲೆನೇ ಇಲ್ಲ… ಮೈದಾನದಲ್ಲೇ CSK ನಾಯಕ ಗರಂ
IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ನ 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್ಕೆ ತಂಡ 83 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಮಹೇಂದ್ರ ಸಿಂಗ್ ಧೋನಿಯ ಮಾತಿಗೆ ಮನ್ನಣೆ ನೀಡುತ್ತಿಲ್ವಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ವೇಳೆ ಸಿಎಸ್ಕೆ ಆಟಗಾರರ ವರ್ತನೆ. ಏಕೆಂದರೆ ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದ ವೇಳೆ ಧೋನಿ ಫೀಲ್ಡಿಂಗ್ ನಿಲ್ಲಿಸಿದ ಕಡೆ ಸಿಎಸ್ಕೆ ತಂಡ ಆಟಗಾರರು ನಿಲ್ಲುತ್ತಿರಲಿಲ್ಲ.
ಧೋನಿ ಸೂಚಿಸಿದ ಭಾಗಗಳಲ್ಲಿ ಫೀಲ್ಡಿಂಗ್ ನಿಲ್ಲಲು ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು ಆಸಕ್ತಿ ತೋರದಿರುವುದು ಕಂಡು ಬಂದಿದೆ. ಇತ್ತ ಆಟಗಾರರ ನಿರ್ಲಕ್ಷ್ಯದಿಂದಾಗಿ ಖುದ್ದು ಧೋನಿ ಕೂಡ ತಮ್ಮ ಸಹನೆ ಕಳೆದುಕೊಂಡರು. ಅಲ್ಲದೆ ಮೈದಾನದಲ್ಲೇ ತನ್ನ ಅಸಮಾಧಾನವನ್ನು ತೋರ್ಪಡಿಸುತ್ತಿರುವುದು ಕಂಡು ಬಂದಿದೆ. ಇದೀಗ ಮೈದಾನದಲ್ಲಿ ಅಸಹಾಯಕತೆಯಿಂದ ವರ್ತಿಸುತ್ತಿರುವ ಧೋನಿಯ ವಿಡಿಯೋ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್ಕೆ ತಂಡ 83 ರನ್ಗಳ ಭರ್ಜರಿ ಜಯ ಸಾಧಿಸಿದೆ.