IPL 2025: ಐಪಿಎಲ್ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ; ರಾಜೀವ್ ಶುಕ್ಲಾ
IPL 2025 Restart: ಮತ್ತು ಪಾಕಿಸ್ತಾನದ ನಡುವಿನ ಯುದ್ಧ ವಿರಾಮದ ನಂತರ, ಐಪಿಎಲ್ 2025 ರ ಮುಂದಿನ ವೇಳಾಪಟ್ಟಿಯ ಕುರಿತು ಅನಿಶ್ಚಿತತೆ ಮುಂದುವರಿದಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಶೀಘ್ರದಲ್ಲೇ ಪರಿಸ್ಥಿತಿ ಸ್ಪಷ್ಟವಾಗುವುದಾಗಿ ತಿಳಿಸಿದ್ದಾರೆ. ಮಂಡಳಿಯು ಎಲ್ಲಾ ತಂಡಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದು ಸಾಧ್ಯವಾದಷ್ಟು ಬೇಗ ಐಪಿಎಲ್ ಅನ್ನು ಪುನರಾರಂಭಿಸಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಪರಿಸ್ಥಿತಿ ತಿಳಿಯಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಐಪಿಎಲ್ 2025 ಸೀಸನ್ ಮತ್ತೆ ಯಾವಾಗ ಆರಂಭವಾಗುತ್ತದೆ ಎಂಬುದರ ಮೇಲೆ ಕ್ರಿಕೆಟ್ ಅಭಿಮಾನಿಗಳ ಕಣ್ಣುಗಳು ನೆಟ್ಟಿವೆ. ಈ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆಯಬೇಕಿತ್ತು. ಮೇ 11 ರ ಭಾನುವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿತ್ತು, ಆದರೆ ಪ್ರಸ್ತುತ ಮಂಡಳಿಯು ಹೊಸ ವೇಳಾಪಟ್ಟಿಯನ್ನು ಇನ್ನೂ ಘೋಷಿಸಿಲ್ಲ. ಈ ಬಗ್ಗೆ ಪ್ರಸ್ತುತ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಮತ್ತು ಮಂಡಳಿಯು ಎಲ್ಲರೊಂದಿಗೆ ಸಂಪರ್ಕದಲ್ಲಿದೆ ಎಂದು ಮಂಡಳಿಯ ಉಪಾಧ್ಯಕ್ಷ ರಾಜೀವ್ ಶುಕ್ಲಾ ಭಾನುವಾರ ತಿಳಿಸಿದ್ದಾರೆ.
ಆದಷ್ಟು ಬೇಗ ಆರಂಭವಾಗಲಿದೆ- ಶುಕ್ಲಾ
ಮೇ 11 ರ ಭಾನುವಾರದಂದು, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರನ್ನು ಐಪಿಎಲ್ 2025 ಅನ್ನು ಮರುಪ್ರಾರಂಭಿಸುವ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಮಂಡಳಿಯು ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸುತ್ತಿದೆ. ಐಪಿಎಲ್ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ. ಮಂಡಳಿಯ ಅಧಿಕಾರಿಗಳು ಈ ಬಗ್ಗೆ ಕೆಲಸ ಮಾಡುತ್ತಿದ್ದಾರೆ. ಬಿಸಿಸಿಐ ಕಾರ್ಯದರ್ಶಿ, ಐಪಿಎಲ್ ಅಧ್ಯಕ್ಷರು ಫ್ರಾಂಚೈಸಿಗಳು ಮತ್ತು ಎಲ್ಲರೊಂದಿಗೆ ಮಾತನಾಡುತ್ತಿದ್ದಾರೆ, ಆದ್ದರಿಂದ ಶೀಘ್ರದಲ್ಲೇ ನಮಗೆ ಈ ನಿರ್ಧಾರದ ಬಗ್ಗೆ ತಿಳಿಯುತ್ತದೆ. ಸಾಧ್ಯವಾದಷ್ಟು ಬೇಗ ಪಂದ್ಯಾವಳಿಯನ್ನು ಪುನರಾರಂಭಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಶುಕ್ಲಾ ಹೇಳಿದರು.

