IPL 2025: 6,6,6,6,6…! ರಾಯಲ್ಸ್ ವಿರುದ್ಧ ಅಬ್ಬರಿಸಿದ ಫಿಲ್ ಸಾಲ್ಟ್; ವಿಡಿಯೋ ನೋಡಿ
Phil Salt 65 Runs: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅವರ ಅದ್ಭುತ ಆರಂಭಿಕ ಜೊತೆಯಾಟದಿಂದ ಆರ್‌ಸಿಬಿ ಸುಲಭ ಗೆಲುವು ದಾಖಲಿಸಿತು. ಸಾಲ್ಟ್ ಅವರ 65 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಪಂದ್ಯದ ಹೈಲೈಟ್ ಆಗಿತ್ತು.
ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ 2025 ರ ಐಪಿಎಲ್ನ 28ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 9 ವಿಕೆಟ್‌ಗಳಿಂದ ಮಣಿಸುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ನೀಡಿದ 173 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ಅದ್ಭುತ ಆರಂಭವನ್ನು ಪಡೆಯಿತು. ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಮೊದಲ ವಿಕೆಟ್‌ಗೆ 8.4 ಓವರ್‌ಗಳಲ್ಲಿ 92 ರನ್‌ಗಳ ಜೊತೆಯಾಟವನ್ನಾಡಿದರು. ಸಾಲ್ಟ್ 33 ಎಸೆತಗಳಲ್ಲಿ 65 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅಬ್ಬರದ ಬ್ಯಾಟಿಂಗ್ ಮಾಡಿದ ಸಾಲ್ಟ್ 5 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಬಾರಿಸಿದರು.
Latest Videos