IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್

Updated on: Mar 30, 2025 | 7:53 AM

Gujarat Titans vs Mumbai Indians: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಚೇಸಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಹಾಗೂ ಸಾಯಿ ಕಿಶೋರ್ ನಡುವೆ ಸಣ್ಣ ಕಿರಿಕ್ ಕೂಡ ನಡೆದಿದೆ.

ಐಪಿಎಲ್​ನ 9ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ. ಏಕೆಂದರೆ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಪ್ರಸಿದ್ಧ್ ಕೇವಲ 18 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು. ಈ ಕರಾರುವಾಕ್ ಬೌಲಿಂಗ್ ಪರಿಣಾಮ ಮುಂಬೈ ಇಂಡಿಯನ್ಸ್ ತಂಡವು ರನ್​​ಗಳಿಸಲು ಪರದಾಡಿದರು.

ಇತ್ತ ಪ್ರಸಿದ್ಧ್​ ಕೃಷ್ಣಗೂ ಮುನ್ನ ಪವರ್​ಪ್ಲೇನಲ್ಲಿ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಇನ್ನು ಅತ್ಯುತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್​ಗಳಲ್ಲಿ 196 ರನ್​ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್​ಗಳಿಸಲಷ್ಟೇ ಶಕ್ತರಾದರು. ಈ ಚೇಸಿಂಗ್ ವೇಳೆ ಹಾರ್ದಿಕ್ ಪಾಂಡ್ಯ ಹಾಗೂ ಸಾಯಿ ಕಿಶೋರ್ ನಡುವೆ ಸಣ್ಣ ಕಿರಿಕ್ ಕೂಡ ನಡೆದಿದೆ.

 

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More