VIDEO: ಔಟಾ… ನಾಟೌಟಾ… ಇದು ಕನ್ನಡಿಗನ ಕೂಲ್ ಕ್ಯಾಚ್​

Updated on: Apr 22, 2025 | 7:11 AM

IPL 2025 KKR vs GT: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 39ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 198 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ಕೇವಲ 159 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT)​ ಪರ ಆಡುತ್ತಿರುವ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ (Prasidh Krishna) ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಈ ಪಂದ್ಯದ 17ನೇ ಓವರ್​ನಲ್ಲಿ ಪ್ರಸಿದ್ಧ್ ಕೃಷ್ಣ ಅವರನ್ನು ಎದುರಿಸಿದ ಕೆಕೆಆರ್ ಬ್ಯಾಟರ್ ರಮಣ್​​ದೀಪ್ ಸಿಂಗ್ ಸ್ಟ್ರೈಟ್ ಹಿಟ್ ಬಾರಿಸಿದ್ದರು.

ಗಾಳಿಯಲ್ಲಿ ವೇಗವಾಗಿ ಬಂದ ಚೆಂಡನ್ನು ಪ್ರಸಿದ್ಧ್ ಕೃಷ್ಣ ಕೂಲ್ ಹಿಡಿದು, ಅಷ್ಟೇ ಕೂಲಾಗಿ ನಡೆದುಕೊಂಡು ಹೋದರು. ಕನ್ನಡಿಗನ ಈ ಕೂಲ್ ಸೆಲೆಬ್ರೇಷನ್​ನಿಂದಾಗಿ ರಮಣ್​ದೀಪ್ ಸಿಂಗ್ ಔಟಾ ಅಥವಾ ನಾಟೌಟಾ ಎಂಬ ಗೊಂದಲಕ್ಕೊಳಗಾದರು. ಇದೀಗ ಈ ಕೂಲ್ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಹಾಲಿ ಚಾಂಪಿಯನ್ ಕೆಕೆಆರ್ ತಂಡವು 20 ಓವರ್​ಗಳಲ್ಲಿ 159 ರನ್​ಗಳಿಸಿ 39 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

 

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More