IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
Mumbai Indians vs Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2025) 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 221 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು 209 ರನ್ಗಳಿಸಲಷ್ಟೇ ಶಕ್ತರಾದರು.
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರಾಯಲ್ಲಾಗಿಯೇ ಗೆಲುವು ದಾಖಲಿಸಿದೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಅವರದ್ದೇ ತವರಿನಲ್ಲಿ ಮಣಿಸುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು.
222 ರನ್ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 209 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್ಸಿಬಿ ತಂಡ 12 ರನ್ಗಳ ರೋಚಕ ಜಯ ಸಾಧಿಸಿದೆ. ವಿಶೇಷ ಎಂದರೆ ವಾಂಖೆಡೆ ಸ್ಟೇಡಿಯಂನಲ್ಲಿ ಇದು ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ 10 ವರ್ಷಗಳ ಬಳಿಕ ಗಳಿಸಿದ ಗೆಲುವಾಗಿದೆ. ಈ ಗೆಲುವಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮ ಹೇಗಿತ್ತು ಎಂಬುದರ ವಿಡಿಯೋ ಇಲ್ಲಿದೆ.

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
