IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
IPL 2025 RCB Practice Match: ಈ ಪಂದ್ಯದಲ್ಲಿ ಟೀಮ್ ರಜತ್ ಹಾಗೂ ಟೀಮ್ ಜಿತೇಶ್ ಇಲೆವೆನ್ ಅನ್ನು ಕಣಕ್ಕಿಳಿಸಲಾಗಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ರಜತ್ ಪರ ದೇವದತ್ತ್ ಪಡಿಕ್ಕಲ್ 48 ಎಸೆತಗಳಲ್ಲಿ 82 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದ ನೆರವಿನಿಂದ ಟೀಮ್ ರಜತ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿತು.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭ್ಯಾಸ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟೀಮ್ ರಜತ್ ಹಾಗೂ ಟೀಮ್ ಜಿತೇಶ್ ಇಲೆವೆನ್ ಅನ್ನು ಕಣಕ್ಕಿಳಿಸಲಾಗಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ರಜತ್ ಪರ ದೇವದತ್ತ್ ಪಡಿಕ್ಕಲ್ 48 ಎಸೆತಗಳಲ್ಲಿ 82 ರನ್ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದ ನೆರವಿನಿಂದ ಟೀಮ್ ರಜತ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಜಿತೇಶ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿ 17 ರನ್ಗಳಿಂದ ಸೋಲೊಪ್ಪಿಕೊಂಡಿತು.
ಈ ಅಭ್ಯಾಸ ಪಂದ್ಯದ ಮುಕ್ತಾಯದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಲ್ಕತ್ತಾದತ್ತ ಪ್ರಯಾಣ ಬೆಳೆಸಿದೆ. ಅದರಂತೆ ಮಾರ್ಚ್ 22 ರಂದು ನಡೆಯಲಿರುವ ಐಪಿಎಲ್ ಸೀಸನ್-18ರ ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ.