RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ ಝಲಕ್

Updated on: Mar 18, 2025 | 3:05 PM

IPL 2025: ಐಪಿಎಲ್​ನ 18ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ರಾಯಲ್ಲಾಗಿಯೇ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮವನ್ನು ಆಯೋಜಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೋಮವಾರ (ಮಾ.17) ನಡೆದ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಆರ್​ಸಿಬಿ ಆಟಗಾರರು ಕಾಣಿಸಿಕೊಂಡಿದ್ದರು. ಇದಕ್ಕೂ ಮುನ್ನ ಸಂಗೀತ ರಸಮಂಜರಿಯನ್ನು ಸಹ ಆಯೋಜಿಸಲಾಗಿತ್ತು.

ಇದೇ ವೇಳೆ ವೇದಿಕೆ ಮೇಲೆ ಕಾಣಿಸಿಕೊಂಡ ವಿರಾಟ್ ಕೊಹ್ಲಿ, ಆರ್​ಸಿಬಿ ತಂಡದ ನೂತನ ನಾಯಕ ರಜತ್ ಪಾಟಿದಾರ್ ಅವರಿಗೆ ಅಭಿಮಾನಿಗಳ ಬೆಂಬಲವನ್ನು ಕೋರಿದರು. ಅಲ್ಲದೆ ಆರ್​ಸಿಬಿ ಫ್ಯಾನ್ಸ್​ಗಳನ್ನು ಒಂದೇ ವಾಕ್ಯದಲ್ಲಿ ಬೊಂಬಾಟ್ ಎನ್ನುವ ಮೂಲಕ ಕಿಂಗ್ ಕೊಹ್ಲಿ ಅಭಿಮಾನಿಗಳ ಮನಸ್ಸು ಗೆದ್ದರು. 18ನೇ ಸೀಸನ್​ನ ಈ ಸ್ಮರಣೀಯ ಕ್ಷಣಗಳ ವಿಡಿಯೋ ಇಲ್ಲಿದೆ.

 

 

Published on: Mar 18, 2025 02:42 PM