AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಸೀಸನ್​ನ ಅತಿ ವೇಗದ ಅರ್ಧಶತಕ ಸಿಡಿಸಿದ ರೊಮಾರಿಯೊ ಶೆಫರ್ಡ್..! ವಿಡಿಯೋ

IPL 2025: ಈ ಸೀಸನ್​ನ ಅತಿ ವೇಗದ ಅರ್ಧಶತಕ ಸಿಡಿಸಿದ ರೊಮಾರಿಯೊ ಶೆಫರ್ಡ್..! ವಿಡಿಯೋ

ಪೃಥ್ವಿಶಂಕರ
|

Updated on: May 03, 2025 | 10:11 PM

Romario Shepherd Smashes Fastest IPL 2025 Fifty: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರೊಮಾರಿಯೊ ಶೆಫರ್ಡ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಐಪಿಎಲ್ ಇತಿಹಾಸದಲ್ಲಿ ವೇಗದ ಅರ್ಧಶತಕ ಬಾರಿಸಿದ ಮೂರನೇ ಆಟಗಾರ ಎನಿಸಿಕೊಂಡರು. ಅವರ ಭರ್ಜರಿ ಆಟದಿಂದ ಆರ್​ಸಿಬಿ ಕೊನೆಯ ಎರಡು ಓವರ್‌ಗಳಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿದ್ದು ವಿಶೇಷ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ರೊಮಾರಿಯೊ ಶೆಫರ್ಡ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದರು. ಇನ್ನಿಂಗ್ಸ್‌ನ ಕೊನೆಯ ಎರಡು ಓವರ್‌ಗಳಲ್ಲಿ 50 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸುವ ಮೂಲಕ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದರು. 18ನೇ ಓವರ್​ನಲ್ಲಿ ಬ್ಯಾಟಿಂಗ್​ಗೆ ಬಂದ ಶೆಫರ್ಡ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಈ ಆವೃತ್ತಿಯ ಅತಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದರು. ಹಾಗೆಯೇ ಐಪಿಎಲ್ ಇತಿಹಾಸದಲ್ಲಿ ವೇಗದ ಅರ್ಧಶತಕ ಬಾರಿಸಿದ ಮೂರನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ತಮ್ಮ ಇನ್ನಿಂಗ್ಸ್​ನಲ್ಲಿ 14 ಎಸೆತಗಳನ್ನು ಎದುರಿಸಿದ ಶೆಫರ್ಡ್ 4 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 53 ರನ್ ಬಾರಿಸಿದರು.