VIDEO: ಜಿತೇಶ್ನ ಹಿಡಿಯುವವರು ಯಾರು? ತಡೆಯುವವರು ಯಾರು?
IPL 2025 RCB vs PBSK: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 101 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್ಗಳಲ್ಲಿ ಪಂದ್ಯ ಮುಗಿಸಿ ಹೊಸ ಇತಿಹಾಸ ನಿರ್ಮಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಜಿತೇಶ್ ಶರ್ಮಾ ಅವರ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ 85 ರನ್ ಬಾರಿಸಿ ಮಿಂಚಿದ್ದ ಜಿತೇಶ್, ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೀಪಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಅದು ಸಹ ಅತ್ಯದ್ಭುತ ಕ್ಯಾಚ್ ಹಿಡಿಯುವ ಮೂಲಕ ಎಂಬುದು ವಿಶೇಷ.
ಮುಲ್ಲನ್ಪುರ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 9 ವಿಕೆಟ್ ಕಳೆದುಕೊಂಡು 101 ರನ್ ಕಲೆಹಾಕಿತ್ತು. ಈ ಹಂತದಲ್ಲಿ ಜೋಶ್ ಹೇಝಲ್ವುಡ್ ಎಸೆದ 15ನೇ ಓವರ್ನ ಮೊದಲ ಎಸೆತವು ಅಝ್ಮತುಲ್ಲಾ ಒಮರ್ಝಾಹಿಯ ಬ್ಯಾಟ್ ಸವರಿ ವಿಕೆಟ್ ಕೀಪರ್ನತ್ತ ಚಿಮ್ಮಿತ್ತು.
ಎಲ್ಲರೂ ಚೆಂಡು ಬೌಂಡರಿ ಲೈನ್ ದಾಟಲಿದೆ ಅಂದುಕೊಳ್ಳುವಷ್ಟರಲ್ಲಿ ಚಕ್ಕನೆ ಜಿಗಿದ ಜಿತೇಶ್ ಶರ್ಮಾ ಒಂದೇ ಕೈಯಲ್ಲಿ ಕ್ಯಾಚ್ ಹಿಡಿದರು. ಈ ಕ್ಯಾಚ್ ಇದೀಗ ಈ ಬಾರಿಯ ಐಪಿಎಲ್ನಲ್ಲಿ ವಿಕೆಟ್ ಕೀಪರ್ ಹಿಡಿದ ಅತ್ಯುತ್ತಮ ಕ್ಯಾಚ್ ಆಗಿ ಗುರುತಿಸಿಕೊಂಡಿದೆ. ಇದೀಗ ಜಿತೇಶ್ ಶರ್ಮಾ ಅವರ ವಂಡರ್ಫುಲ್ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಯುವ ವಿಕೆಟ್ ಕೀಪರ್ನ ಪರಾಕ್ರಮಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಕೇವಲ 101 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 10 ಓವರ್ಗಳಲ್ಲಿ ಪಂದ್ಯ ಮುಗಿಸಿ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

