AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್

ಬರೋಬ್ಬರಿ 27 ಕೋಟಿ ರೂ… LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್

ಝಾಹಿರ್ ಯೂಸುಫ್
|

Updated on: Apr 23, 2025 | 9:04 AM

IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 40ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 159 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್​ಗಳಲ್ಲಿ ಗುರಿ ತಲುಪುವ ಮೂಲಕ 8 ವಿಕೆಟ್​ಗಳ ಜಯ ಸಾಧಿಸಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಅತ್ಯಂತ ದುಬಾರಿ ಆಟಗಾರ ರಿಷಭ್ ಪಂತ್ (Rishabh Pant) ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಈ ಕಳಪೆ ಫಾರ್ಮ್​ ಕಾರಣದಿಂದಲೇ ಇದೀಗ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಮೂಲೆಗುಂಪಾಗುತ್ತಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂತ್ ಕಣಕ್ಕಿಳಿದ ಬ್ಯಾಟಿಂಗ್ ಕ್ರಮಾಂಕ 7.

ರಿಷಭ್ ಪಂತ್ ಟಿ20 ಕ್ರಿಕೆಟ್​ನಲ್ಲಿ 4ನೇ ಮತ್ತು 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಆಟಗಾರ. ಆದರೆ ಇದೇ ಮೊದಲ ಬಾರಿಗೆ ಅವರು 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ. ಇನ್ನು ಏಳನೇ ಕ್ರಮಾಂಕದಲ್ಲಿ ಬಂದ ರಿಷಭ್ ಪಂತ್ 2ನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ, ರಿಷಭ್ ಪಂತ್​ಗಿಂತ ಮುಂಚಿತವಾಗಿ ಅನ್​ಕ್ಯಾಪ್ಡ್ ಆಟಗಾರರಾದ ಅಬ್ದುಲ್ ಸಮದ್, ಆಯುಷ್ ಬದೋನಿ ಅವರನ್ನು ಕಣಕ್ಕಿಳಿಸಲಾಗಿತ್ತು. ಅಲ್ಲದೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೊನೆಯ ಬ್ಯಾಟರ್​ ಆಗಿ ಪಂತ್​ಗೆ ಅವಕಾಶ ನೀಡಲಾಗಿದೆ.

ಹೀಗಾಗಿಯೇ ಕಳಪೆ ಫಾರ್ಮ್​ನಲ್ಲಿರುವ 27 ಕೋಟಿ ರೂ. ಮೌಲ್ಯದ ರಿಷಭ್ ಪಂತ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂಲೆ ಗುಂಪು ಮಾಡುತ್ತಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 159 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್​ಗಳಲ್ಲಿ ಗುರಿ ತಲುಪುವ ಮೂಲಕ 8 ವಿಕೆಟ್​ಗಳ ಜಯ ಸಾಧಿಸಿದೆ.