IPL 2025: ಆರ್‌ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್; ವಿಡಿಯೋ ನೋಡಿ
Rishabh Pant century: ಮೇ 27ರಂದು ನಡೆದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಭ್ ಪಂತ್ ಅವರು ಅದ್ಭುತ ಶತಕ ಬಾರಿಸಿ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು. 7 ವರ್ಷಗಳ ನಂತರದ ಈ ಶತಕದ ಸಂಭ್ರಮದಲ್ಲಿ ಪಂತ್ ಪಲ್ಟಿ ಹೊಡೆದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರ 118 ರನ್‌ಗಳ ಅಜೇಯ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್‌ಗಳು ಸೇರಿದ್ದವು.
ಮೇ 27 ರಂದು ನಡೆದ ಆರ್‌ಸಿಬಿ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ನಾಯಕ ರಿಷಭ್ ಪಂತ್ ಅದ್ಭುತ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಬಹುಬೇಗನೇ ಬ್ಯಾಟಿಂಗ್ಗೆ ಬಂದ ರಿಷಬ್ ಪಂತ್ ಆರ್‌ಸಿಬಿ ವಿರುದ್ಧ ಸ್ಫೋಟಕ ಶತಕ ಬಾರಿಸಿದರು. ಐಪಿಎಲ್‌ನಲ್ಲಿ 2018 ರಲ್ಲಿ ಕೊನೆಯದಾಗಿ ಶತಕ ಬಾರಿಸಿದ್ದ ಪಂತ್ ಇದೀಗ 7 ವರ್ಷಗಳ ನಂತರ ಐಪಿಎಲ್‌ನಲ್ಲಿ ಶತಕ ಬಾರಿಸಿದ್ದು, ಶತಕ ಬಾರಿಸಿದ ಕೂಡಲೇ ಮೈದಾನದಲ್ಲಿ ಪಲ್ಟಿ ಹೊಡೆದು ವಿಭಿನ್ನವಾಗಿ ಸಂಭ್ರಮಿಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಪಂತ್ 118 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿಗಳು ಮತ್ತು 8 ಸಿಕ್ಸರ್‌ಗಳು ಸೇರಿದ್ದವು. ಕೊನೆಯವರೆಗೂ ಅಜೇಯರಾಗಿ ಉಳಿದ ಪಂತ್ 193.44 ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟಿಂಗ್ ಮಾಡಿದರು. ಪಂತ್ ಅವರ ಈ ಅಬ್ಬರದ ಬ್ಯಾಟಿಂಗ್ನಿಂದ ಲಕ್ನೋ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 227 ರನ್ ಗಳಿಸಿತು. ಪಂತ್ ಜೊತೆಗೆ ಮಿಚೆಲ್ ಮಾರ್ಷ್ ಕೂಡ 37 ಎಸೆತಗಳಲ್ಲಿ 67 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಇದಲ್ಲದೆ, ನಿಕೋಲಸ್ ಪೂರನ್ ಕೂಡ 10 ಎಸೆತಗಳಲ್ಲಿ 13 ರನ್ ಗಳಿಸಿದರು.