VIDEO: ಝಹೀರ್ ಖಾನ್ – ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
IPL 2025 LSG vs DC: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 40ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್ಗಳಲ್ಲಿ ಗುರಿ ತಲುಪಿ 8 ವಿಕೆಟ್ಗಳ ಜಯ ಸಾಧಿಸಿದೆ.
IPL 2025: ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಐಪಿಎಲ್ನ 40ನೇ ಪಂದ್ಯ. ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೊನೆಯ ಬ್ಯಾಟರ್ ಆಗಿ ಕಣಕ್ಕಿಳಿದದ್ದು ನಾಯಕ ರಿಷಭ್ ಪಂತ್ (Rishabh Pant).
ರಿಷಭ್ ಪಂತ್ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದಿದ್ದು ಅಚ್ಚರಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪಂತ್ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಝಹೀರ್ ಖಾನ್ ಜೊತೆ ವಾಗ್ವಾದ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಮೇಲ್ನೋಟಕ್ಕೆ ತನ್ನನ್ನು ಬ್ಯಾಟಿಂಗ್ಗೆ ಕಳುಹಿಸದಿರುವ ಬಗ್ಗೆ ರಿಷಭ್ ಪಂತ್, ಝಹೀರ್ ಖಾನ್ ಅವರೊಂದಿಗೆ ಆಕ್ರೋಶ ವ್ಯಕ್ತಪಡಿಸುತ್ತಿರುವಂತೆ ಈ ವಿಡಿಯೋದಲ್ಲಿ ಕಾಣಬಹುದು. ಈ ಮಾತಿನ ಚಕಮಕಿಯ ಬಳಿಕ ರಿಷಭ್ ಪಂತ್ 20ನೇ ಓವರ್ನಲ್ಲಿ ಬ್ಯಾಟಿಂಗ್ಗೆ ಆಗಮಿಸಿದ್ದರು. ಹೀಗಾಗಿಯೇ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಢಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 159 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್ಗಳಲ್ಲಿ 161 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ತುಂಬಿದ ಅಪ್ಪ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
