ಮೊಹಮ್ಮದ್ ಸಿರಾಜ್ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
2024 ರಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್ಗಳಲ್ಲಿ 169 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 7 ರನ್ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
IPL 2025: ಐಪಿಎಲ್ 2025 ರ 56 ನೇ ಪಂದ್ಯವು ಮುಂಬೈ ಇಂಡಿಯನ್ಸ್ (MI) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ಗೆ ವಜ್ರದ ಉಂಗುರವನ್ನು ಹಸ್ತಾಂತರಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ವಜ್ರದ ಉಂಗುರವನ್ನು ಉಡುಗೊರೆಯಾಗಿ ಘೋಷಿಸಿತ್ತು.
ಬಿಸಿಸಿಐನ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಈ ಉಡುಗೊರೆಯನ್ನು ನೀಡಲಾಗಿತ್ತು. ಆದರೆ ಮೊಹಮ್ಮದ್ ಸಿರಾಜ್ ಆಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇದೀಗ ಸಿರಾಜ್ಗೆ ರೋಹಿತ್ ಶರ್ಮಾ ವಜ್ರದುಂಗುರವನ್ನು ಹಸ್ತಾಂತರಿಸಿದ್ದಾರೆ. ಈ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ಇನ್ನು ಈ ವಜ್ರದ ಉಂಗುರವು 60 ಗ್ರಾಂ 18 ಕ್ಯಾರೆಟ್ ಚಿನ್ನವನ್ನು ಸಹ ಒಳಗೊಂಡಿದೆ. ಅಲ್ಲದೆ ಉಂಗುರದ ಮೇಲೆ ಆಟಗಾರನ ಹೆಸರು ಮತ್ತು ಜೆರ್ಸಿ ಸಂಖ್ಯೆಯನ್ನು ಬರೆಯಲಾಗಿದೆ. ಇದಲ್ಲದೆ, 2024 ರ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಯಾವ ತಂಡವನ್ನು ಎಷ್ಟು ರನ್ ಅಥವಾ ವಿಕೆಟ್‌ಗಳಿಂದ ಸೋಲಿಸಿದೆ ಎಂಬುದನ್ನು ಸಹ ಈ ಉಂಗುರದ ಮೇಲೆ ಬರೆಯಲಾಗಿರುವುದು ವಿಶೇಷ.
2024 ರಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್ಗಳಲ್ಲಿ 169 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 7 ರನ್ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್