ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ

Updated on: May 06, 2025 | 9:25 AM

2024 ರಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್​ಗಳಲ್ಲಿ 169 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 7 ರನ್​ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

IPL 2025: ಐಪಿಎಲ್ 2025 ರ 56 ನೇ ಪಂದ್ಯವು ಮುಂಬೈ ಇಂಡಿಯನ್ಸ್ (MI) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರವನ್ನು ಹಸ್ತಾಂತರಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ವಜ್ರದ ಉಂಗುರವನ್ನು ಉಡುಗೊರೆಯಾಗಿ ಘೋಷಿಸಿತ್ತು.

ಬಿಸಿಸಿಐನ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಈ ಉಡುಗೊರೆಯನ್ನು ನೀಡಲಾಗಿತ್ತು. ಆದರೆ ಮೊಹಮ್ಮದ್ ಸಿರಾಜ್ ಆಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇದೀಗ ಸಿರಾಜ್​ಗೆ ರೋಹಿತ್ ಶರ್ಮಾ ವಜ್ರದುಂಗುರವನ್ನು ಹಸ್ತಾಂತರಿಸಿದ್ದಾರೆ. ಈ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಇನ್ನು ಈ ವಜ್ರದ ಉಂಗುರವು 60 ಗ್ರಾಂ 18 ಕ್ಯಾರೆಟ್ ಚಿನ್ನವನ್ನು ಸಹ ಒಳಗೊಂಡಿದೆ. ಅಲ್ಲದೆ ಉಂಗುರದ ಮೇಲೆ ಆಟಗಾರನ ಹೆಸರು ಮತ್ತು ಜೆರ್ಸಿ ಸಂಖ್ಯೆಯನ್ನು ಬರೆಯಲಾಗಿದೆ. ಇದಲ್ಲದೆ, 2024 ರ ಟಿ 20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಯಾವ ತಂಡವನ್ನು ಎಷ್ಟು ರನ್ ಅಥವಾ ವಿಕೆಟ್‌ಗಳಿಂದ ಸೋಲಿಸಿದೆ ಎಂಬುದನ್ನು ಸಹ ಈ ಉಂಗುರದ ಮೇಲೆ ಬರೆಯಲಾಗಿರುವುದು ವಿಶೇಷ.

2024 ರಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್​ಗಳಲ್ಲಿ 169 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಭಾರತ ತಂಡ 7 ರನ್​ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More